Shubhashaya News

ಖೇಲೋ ಇಂಡಿಯಾ ಸಂವಾದ್ – ಖೇಲ್ ಕಿ ಬಾತ್, ಪಿಎಂ ಮೋದಿ ಕೆ ಸಾಥ್’ ಸಿಯುಕೆ ಭಾಗಿ”

ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಆರೋಗ್ಯ, ಆತ್ಮವಿಶ್ವಾಸ ವೃದ್ಧಿ: ಕುಲಪತಿ

ಆಳಂದ: ಸಿಯುಕೆಯಲ್ಲಿ ಆಚರಿಸಿದ ರಾಷ್ಟಿçÃಯ ಕ್ರೀಡಾ ದಿನಾಚರಣೆಯಲ್ಲಿ ಕುಲಪತಿ ಪ್ರೊ. ಬಟ್ಟು ನಾರಾಯಣ, ಪ್ರೊ. ಬಸವರಾಜ ಎಂ. ಕುಬಕಡ್ಡಿ, ಸುಮೀತ್ ಎಸ್. ಪಾರ್ಕಿ, ಡಾ. ಎಂ.ಎಸ್. ಪಾಸೋಡಿ, ಡಾ. ಮಲ್ಲಿಕಾರ್ಜುನ ಹೂಗಾರ, ಡಾ. ಸಾಯಿ ಅಭಿನವ ಸೇರಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಆಳಂದ: ರಾಷ್ಟಿçÃಯ ಕ್ರೀಡಾ ದಿನಾಚರಣೆ ಅಂಗವಾಗಿ ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ‘ಮೈ ಭಾರತ್’ ವತಿಯಿಂದ ಆಯೋಜಿಸಿದ್ದ ‘ಖೇಲೋ ಇಂಡಿಯಾ ಸಂವಾದ್–ಖೇಲ್ ಕಿ ಬಾತ್, ಪಿಎಂ ಮೋದಿ ಕೆ ಸಾಥ್’ ಕಾರ್ಯಕ್ರಮದಲ್ಲಿ ತಾಲೂಕಿನ ಕಡಗಂಚಿ ಬಳಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ವರ್ಚುವಲ್ ಮೂಲಕ ಭಾಗವಹಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಕಡ್ಡಾಯವಾಗಿ ಯಾವುದಾದರೂ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಪ್ರತಿದಿನ ದೈಹಿಕ ಚಟುವಟಿಕೆಗೆ ಸಮಯ ಮೀಸಲಿಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಕ್ರೀಡೆ ಮತ್ತು ವ್ಯಾಯಾಮ ಉತ್ತಮ ಆರೋಗ್ಯದ ಜತೆಗೆ ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಮಾನಸಿಕ ಸದೃಢತೆಯನ್ನು ಹೆಚ್ಚಿಸುತ್ತವೆ. ಇದರಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿಯೂ ಹೆಚ್ಚು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿಶ್ವವಿದ್ಯಾಲಯದಲ್ಲಿರುವ ಸುಸಜ್ಜಿತ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳು, ಜಿಮ್ ಹಾಗೂ ನುರಿತ ತರಬೇತುದಾರರ ಸೇವೆಯನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವಜನರನ್ನು ಉದ್ದೇಶಿಸಿ ನೀಡಿದ ಸಂದೇಶವು ಯುವ ಸಮುದಾಯದಲ್ಲಿ ‘ಫಿಟ್ ಇಂಡಿಯಾ’ ಮನೋಭಾವ ಬೆಳೆಸುವ ಜತೆಗೆ ವಿಕಸಿತ ಭಾರತ–೨೦೪೭ ನಿರ್ಮಾಣದ ರಾಷ್ಟಿçÃಯ ಸಂಕಲ್ಪಕ್ಕೆ ಕೊಡುಗೆ ನೀಡಲು ಪ್ರೇರಣೆ ನೀಡಲಿದೆ ಎಂದು ಹೇಳಿದರು.
ಕಾನೂನು ಅಧ್ಯಯನ ಮತ್ತು ವಿದ್ಯಾರ್ಥಿ ಕಲ್ಯಾಣದ ಡೀನ್ ಪ್ರೊ. ಬಸವರಾಜ ಎಂ. ಕುಬಕಡ್ಡಿ ಮಾತನಾಡಿ, ಆರೋಗ್ಯವೇ ಭಾಗ್ಯವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಕ್ರೀಡಾ ವಿಭಾಗದ ನೂತನ ವೆಬ್‌ಸೈಟ್‌ನ್ನು ಕುಲಪತಿಗಳು ಅನಾವರಣಗೊಳಿಸಿದರು. ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದ ಆಟಗಾರರಾದ ಸುರೇಶ್, ಸಿರಾಜುದ್ದೀನ್ ಹಾಗೂ ಸಂತೋಷ್ ಅವರನ್ನು ಸನ್ಮಾನಿಸಲಾಯಿತು.
ಮೈ ಭಾರತ್ ಕೇಂದ್ರದ ಜಿಲ್ಲಾ ಸಹಾಯಕ ನಿರ್ದೇಶಕ ಸುಮೀತ್ ಎಸ್. ಪಾರ್ಕಿ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಂ.ಎಸ್. ಪಾಸೋಡಿ, ಕಾರ್ಯಕ್ರಮ ಸಂಯೋಜಕ ಡಾ. ಮಲ್ಲಿಕಾರ್ಜುನ ಹೂಗಾರ, ಕ್ರೀಡಾ ಸಂಯೋಜಕ ಡಾ. ಸಾಯಿ ಅಭಿನವ ಸೇರಿದಂತೆ ವಿವಿಧ ವಿಭಾಗಗಳ ಡೀನ್‌ಗಳು, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave A Reply

Your email address will not be published.