ಆಳಂದ: ರಾಜ್ಯದ ಕೃಷಿ ಸಚಿವರಿಗೆ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪೂರ ನೇತೃತ್ವದ ನಿಯೋಗವು ಮನವಿ ಸಲ್ಲಿಸಿತು.
ಆಳಂದ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿದ್ದು, ಅನಾವೃಷ್ಟಿಯಿಂದ ತೊಂದರೆಗೊಳಗಾಗಿರುವ ಕಲಬುರಗಿ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ದರಾಮಯ್ಯ ಪಾಟೀಲ ಧÀಂಗಾಪುರ ಆಗ್ರಹಿಸಿದ್ದಾರೆ.
ಕೃಷಿ ಸಚಿವರಾಗಿ ಪಿ.ಎಂ. ನರೇಂದ್ರಸ್ವಾಮಿ ಅಧಿಕಾರ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಚಿವರನ್ನು ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಅಭಿನಂದಿಸಿದ ಸಿದ್ದರಾಮಯ್ಯ ಪಾಟೀಲ ದಂಗಾಪುರ ಅವರು, ತಮ್ಮ ರೈತ ನಿಯೋಗದೊಂದಿಗೆ ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು.
ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ನಿಯಮದಡಿ ರಾಜ್ಯ ಸರ್ಕಾರವೂ ಪರಿಹಾರ ನೀಡಿದ್ದರಿಂದ ರೈತರಿಗೆ ಕೊಂಚ ನೆಮ್ಮದಿ ದೊರೆತಿತ್ತು. ಈ ವರ್ಷವೂ ರೈತರು ಸಾಲ ಮಾಡಿ ಬೀಜ, ರಸಗೊಬ್ಬರ ಖರೀದಿಸಿ ಮುಂಗಾರು ಬಿತ್ತನೆ ಕೈಗೊಂಡಿದ್ದಾರೆ. ಆದರೆ ಸಮರ್ಪಕ ಮಳೆಯಾಗದೆ ಬಿತ್ತನೆಯಾದ ಬೆಳೆಗಳು ಬಾಡುತ್ತಿವೆ. ಇನ್ನೂ ಹಲವು ಪ್ರದೇಶಗಳಲ್ಲಿ ಮಳೆಯ ಕೊರತೆಯಿಂದ ಬಿತ್ತನೆಯೇ ಆಗಿಲ್ಲ ಎಂದು ಅವರು ಸಚಿವರ ಗಮನಕ್ಕೆ ತಂದರು.
ಜಿಲ್ಲೆಯಲ್ಲಿ ಉಂಟಾಗಿರುವ ಅನಾವೃಷ್ಟಿಯ ಪರಿಸ್ಥಿತಿಯನ್ನು ಪರಿಗಣಿಸಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಬೇಕು. ಜತೆಗೆ ಬೆಳೆ ಹಾನಿಗೊಳಗಾದ ರೈತರಿಗೆ ಸರ್ಕಾರದ ನಿಯಮಾನುಸಾರ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆಯ ವತಿಯಿಂದ ರೈತರಿಗೆ ಬೆಳೆ ವಿಮೆ ಮಾಡಿಸುವ ಕುರಿತು ನಿರಂತರ ಜಾಗೃತಿ ಮೂಡಿಸಿದ್ದರಿಂದ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆ ಮಾಡಿಸಿದ್ದಾರೆ. ಇದೀಗ ಅನಾವೃಷ್ಟಿಯಿಂದ ಬೆಳೆಗಳು ಹಾನಿಗೊಳಗಾಗುತ್ತಿರುವ ಹಿನ್ನೆಲೆಯಲ್ಲಿ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಮಧ್ಯಂತರ ಪರಿಹಾರವನ್ನು ತ್ವರಿತವಾಗಿ ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಪಾಟೀಲ ಧÀಂಗಾಪುರ ಒತ್ತಾಯಿಸಿದರು.
ರೈತರು ಈಗಾಗಲೇ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ಸಾಲ ಮಾಡಿಕೊಂಡಿದ್ದು, ಮಳೆ ಕೈಕೊಟ್ಟಿರುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಸರ್ಕಾರವು ವಿಳಂಬ ಮಾಡದೆ ಬರ ಪರಿಸ್ಥಿತಿಯ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ಹಾಗೂ ಬೆಳೆ ವಿಮೆಯ ಮಧ್ಯಂತರ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ರೈತರ ಪರವಾಗಿ ಹಾಗೂ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಕೃಷಿ ಸಚಿವರು ಆಗಿರುವ ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷರಾದ ಪಿ.ಎಂ.ನರೇAದ್ರಸ್ವಾಮಿ ಅವರಿಗೆ ಮನವಿ ಸಲ್ಲಿಸಿ, ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವAತೆ ಒತ್ತಾಯಿಸಲಾಗಿದೆ ಎಂದು ಸಿದ್ದರಾಮಯ್ಯ ಪಾಟೀಲ ದಂಗಾಪುರ ತಿಳಿಸಿದ್ದಾರೆ.
ಈ ಸಂದರ್ಬದಲ್ಲಿ ಕೃಷಿಕ ಸಮಾಜ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ ಉಡಗಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.