ಕಲಬುರಗಿ: ಕರ್ನಾಟಕ ಜಾನಪದ ಪರಿಷತ್ತಿನ ಕೇರಳ ಘಟಕದ ಅಧ್ಯಕ್ಷ, ಹಿರಿಯ ವೈದ್ಯ ಹಾಗೂ ‘ಶ್ರೇಷ್ಠ ಹೊರನಾಡ ಕನ್ನಡಿಗ’ ಪ್ರಶಸ್ತಿ ಪುರಸ್ಕೃತ ಡಾ. ಮಲ್ಲಿಕಾರ್ಜುನ ಎಸ್. ನಾಸಿ ಅವರಿಗೆ ಪ್ರತಿಷ್ಠಿತ ‘ಗ್ಲೋಬಲ್ ಐಕಾನಿಕ್ ಅಚೀವ್‌ಮೆಂಟ್ ಪ್ರಶಸ್ತಿ–2026’ ನೀಡಿ ಗೌರವಿಸಲಾಗಿದೆ.
ನವದೆಹಲಿಯಲ್ಲಿ ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ವತಿಯಿಂದ ಆಯೋಜಿಸಿದ್ದ ‘ಗ್ಲೋರಿ ಆಫ್ ಇಂಡಿಯಾ ಅವಾರ್ಡ್–2026’ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಛತ್ತೀಸ್‌ಗಢ ರಾಜ್ಯದ ವಸತಿ ಮತ್ತು ನಗರಾಭಿವೃದ್ಧಿ ಸಚಿವ ತೋಖನ್ ಸಾಹು ಅವರು ಡಾ. ನಾಸಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಸಮಾಜ ಸೇವೆ, ನಾಯಕತ್ವ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಡಾ. ಮಲ್ಲಿಕಾರ್ಜುನ ಎಸ್. ನಾಸಿ ಅವರು ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಹಿಂದಿ ಸಲಹಾ ಸಮಿತಿ ಸದಸ್ಯೆ ವೈಶಾಲಿ ತೋಮರ್, ಡಾ. ಜಿ. ಶಿವಬಾಲ ಮುರುಗನ್, ಡಾ. ಶೈಜು ಡೊಲ್ಪಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.