Shubhashaya News

ಕೆಇಎ ವಿಭಾಗವಾರು ವಲಯ ಕೇಂದ್ರ ಸ್ಥಾಪಿಸಿ: ಮುಖ್ಯಮಂತ್ರಿಗಳಿಗೆ ಹಣಮಂತ ಶೇರಿ ಮನವಿ

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಲ್ಪಿಸಿ 

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಏಇಂ) ಸೇವೆಗಳನ್ನು ವಿಕೇಂದ್ರೀಕರಣಗೊಳಿಸಿ, ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ವಿಭಾಗವಾರು ವಲಯ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ತ್ವರಿತ ಪರಿಹಾರ ಕಲ್ಪಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ಆಳಂದ ಅಧ್ಯಕ್ಷರಾದ ಹಣಮಂತ ಶೇರಿ, ಖಜೂರಿ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಆಳಂದ ತಹಸೀಲ್ದಾರ್ ಅವರ ಮೂಲಕ ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಅವರು, ಏಇಂ ವತಿಯಿಂದ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿ, ಸೀಟು ಹಂಚಿಕೆ, ದಾಖಲೆ ಪರಿಶೀಲನೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಕ್ರಿಯೆಗಳು ನಡೆಯುತ್ತಿದ್ದು, ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಏಇಂ ಸೇವೆಗಳು ಮುಖ್ಯವಾಗಿ ಬೆಂಗಳೂರಿಗೆ ಕೇಂದ್ರೀಕೃತವಾಗಿರುವುದರಿAದ ಜಿಲ್ಲೆ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಆನ್‌ಲೈನ್ ಅರ್ಜಿ ಸಲ್ಲಿಕೆ, ದಾಖಲೆ ಅಪ್‌ಲೋಡ್, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ, ಆಯ್ಕೆಗಳ ದಾಖಲಾತಿ, ಸೀಟು ಹಂಚಿಕೆ ಹಾಗೂ ಪ್ರವೇಶಾತಿ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷಗಳು ಉಂಟಾದಾಗ ವಿದ್ಯಾರ್ಥಿಗಳು ಬೆಂಗಳೂರಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಮಯ, ಹಣ ಮತ್ತು ಮಾನಸಿಕ ಒತ್ತಡ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದಾರೆ.

ಅಲ್ಲದೆ, ಏಇಂ ಸಹಾಯವಾಣಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕರೆಗಳು ಬರುತ್ತಿರುವುದರಿಂದ ತಕ್ಷಣ ಸ್ಪಂದನೆ ದೊರೆಯದಿರುವುದು, ಸಲ್ಲಿಸಿದ ದೂರುಗಳ ಸ್ಥಿತಿಗತಿ ತಿಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದಿರುವುದು ಹಾಗೂ ಸ್ಥಳೀಯ ಮಟ್ಟದಲ್ಲಿ ತಾಂತ್ರಿಕ ಮಾರ್ಗದರ್ಶನದ ಕೊರತೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ಗಮನ ಸೆಳೆದಿದ್ದಾರೆ.

ವಲಯ ಕೇಂದ್ರಗಳಲ್ಲಿ ಈ ಸೌಲಭ್ಯ ಕಲ್ಪಿಸಲು ಆಗ್ರಹ

ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಏಇಂ ವಿಭಾಗವಾರು ವಲಯ ಕೇಂದ್ರಗಳನ್ನು ಸ್ಥಾಪಿಸಿ, ಅಲ್ಲಿ ತರಬೇತಿ ಪಡೆದ ತಾಂತ್ರಿಕ ಸಿಬ್ಬಂದಿ, ಪ್ರವೇಶಾತಿ ತಜ್ಞರು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಹಣಮಂತ ಶೇರಿ ಆಗ್ರಹಿಸಿದ್ದಾರೆ.

ವಲಯ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಕೆ, ದಾಖಲೆ ಪರಿಶೀಲನೆ, ದಾಖಲೆ ಅಪ್‌ಲೋಡ್, ಸೀಟು ಹಂಚಿಕೆ, ಆಯ್ಕೆಗಳ ದಾಖಲಾತಿ ಹಾಗೂ ಪ್ರವೇಶಾತಿ ಸಂಬAಧಿತ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ನೆರವು ನೀಡಬೇಕು. ಸೀಟು ಹಂಚಿಕೆ ಮತ್ತು ತಾಂತ್ರಿಕ ದೋಷಗಳಿಗೆ ತ್ವರಿತ ಪರಿಹಾರ ಒದಗಿಸುವ ವ್ಯವಸ್ಥೆ ರೂಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಸ್ತುತ ಇರುವ ಸಹಾಯವಾಣಿಯನ್ನು ಬಲಪಡಿಸಿ, ವಿಭಾಗವಾರು ಅಥವಾ ವಲಯವಾರು ಸಹಾಯವಾಣಿ ವ್ಯವಸ್ಥೆ ರೂಪಿಸಬೇಕು. ವಿದ್ಯಾರ್ಥಿಗಳು ಸಲ್ಲಿಸುವ ಪ್ರತಿಯೊಂದು ದೂರಿಗೆ ಪ್ರತ್ಯೇಕ ದೂರು ಸಂಖ್ಯೆಯನ್ನು ನೀಡಿ, ಅದರ ಪ್ರಗತಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸುವ ಅವಕಾಶ ಕಲ್ಪಿಸಬೇಕು. ಪರೀಕ್ಷೆ ಹಾಗೂ ಸೀಟು ಹಂಚಿಕೆ ಸಂದರ್ಭದಲ್ಲಿ ಉಂಟಾಗುವ ತಾಂತ್ರಿಕ ಸಮಸ್ಯೆಗಳಿಗೆ ೨೪x೭ ತಾಂತ್ರಿಕ ನೆರವು ನೀಡುವ ವ್ಯವಸ್ಥೆಯನ್ನೂ ಪರಿಗಣಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಲಯ ಕೇಂದ್ರಗಳಲ್ಲಿ ಉಚಿತ ಮಾರ್ಗದರ್ಶನ ಶಿಬಿರಗಳನ್ನು ಆಯೋಜಿಸಿ, ಆನ್‌ಲೈನ್ ಅರ್ಜಿ, ದಾಖಲೆ ಅಪ್‌ಲೋಡ್, ಆಯ್ಕೆಗಳ ದಾಖಲಾತಿ ಹಾಗೂ ಪ್ರವೇಶಾತಿ ಪ್ರಕ್ರಿಯೆಗಳ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದ್ದಾರೆ.

“ತಾಂತ್ರಿಕ ದೋಷ ಅಥವಾ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿನ ಗೊಂದಲದಿAದ ಯಾವುದೇ ಅರ್ಹ ವಿದ್ಯಾರ್ಥಿಗೆ ಅನ್ಯಾಯವಾಗಬಾರದು. ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ಮತ್ತು ನ್ಯಾಯ ದೊರೆಯುವಂತೆ ಏಇಂ ಸೇವೆಗಳನ್ನು ವಿದ್ಯಾರ್ಥಿ ಸ್ನೇಹಿಯಾಗಿ ರೂಪಿಸುವುದು ಸರ್ಕಾರದ ಆದ್ಯತೆಯಾಗಬೇಕು” ಎಂದು ಹಣಮಂತ ಶೇರಿ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿಭಾಗವಾರು ವಲಯ ಕೇಂದ್ರಗಳನ್ನು ಸ್ಥಾಪಿಸಲು ಅಗತ್ಯ ಆಡಳಿತಾತ್ಮಕ ಹಾಗೂ ತಾಂತ್ರಿಕ ಕ್ರಮಗಳನ್ನು ಶೀಘ್ರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 

Leave A Reply

Your email address will not be published.