Shubhashaya News

ಪಡಸಾವಳಿ ಶಾಲೆ ಬಾಲಕಿಯರ ಖೋ ಖೋ ತಾಲೂಕು ಮಟ್ಟಕ್ಕೆ

ಆಳಂದ: ಪಟ್ಟಣದ ಸಾರ್ವಜನಿಕ ಕ್ರೀಡಾಂಗಣದಲ್ಲಿ ನಡೆದ ಮಾದನಹಿಪ್ಪರಗಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಪಡಸಾವಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಕೊಚ್‌ಗಳೊಂದಿಗೆ ಸಂಭ್ರಮಿಸಿದರು.

ಆಳಂದ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ೨೦೨೬–೨೭ನೇ ಸಾಲಿನ ಮಾದನಹಿಪ್ಪರಗಾ ವಲಯ ಮಟ್ಟದ ಕ್ರೀಡಾಕೂಟವು ಪಟ್ಟಣದ ಸಾರ್ವಜನಿಕ ಕ್ರೀಡಾಂಗಣದಲ್ಲಿ ಗುರುವಾರ ನಡೆಯಿತು. ಕ್ರೀಡಾಕೂಟದಲ್ಲಿ ಪಡಸಾವಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮೆರೆದಿದ್ದಾರೆ.
ಬಾಲಕಿಯರ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ, ೧೦೦, ೨೦೦ ಹಾಗೂ ೪೦೦ ಮೀಟರ್ ಓಟದ ಬಾಲಕಿಯರ ವಿಭಾಗದಲ್ಲೂ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿದ್ದಾರೆ. ೪೦೦ ಮೀಟರ್ ರಿಲೆ ಸ್ಪರ್ಧೆಯಲ್ಲಿಯೂ ತಂಡ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದೆ.
ವಿದ್ಯಾರ್ಥಿಗಳ ಸಾಧನೆಗೆ ಕೋಚ್ ಪರಮೇಶ್ವರ ಕವಲಗಿ ಹಾಗೂ ತಂಡದ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ ಸಂತಸ ವ್ಯಕ್ತಪಡಿಸಿದ್ದಾರೆ. ಗ್ರಾಮದ ಪಿಕೆಪಿಎಸ್ ಅಧ್ಯಕ್ಷ ಚಂದ್ರಕಾAತ ಬೆಳಮ, ಗ್ರಾಪಂ ಪಿಡಿಒ ಶಿವಕುಮಾರ ಬಿರಾದಾರ, ಶಾಲೆಯ ಮುಖ್ಯ ಶಿಕ್ಷಕ ಮಲ್ಕಣ್ಣ ಇಕ್ಕಳಕಿ, ಸಿಬ್ಬಂದಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಕ್ರೀಡಾಕೂಟದಲ್ಲಿ ವಿಜೇತ ಮಕ್ಕಳಿಗೆ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಅರವಿಂದ ಭಾಸಗಿ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಹಾದೇವ ಗುಣಕಿ, ಉಪಾಧ್ಯಕ್ಷ ಯಶ್ವಂತ ಜೇಮಶೆಟ್ಟಿ, ಪ್ರೌಢಶಾಲೆ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದತ್ತು ಬಡಿಗೇರ, ಶರಣಬಸಪ್ಪ ವಡಗಾಂವ, ರಾಜಕುಮಾರ ಕಲಶೆಟ್ಟಿ ಸೇರಿದಂತೆ ದೈಹಿಕ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.
ಇದೇ ವೇಳೆ ತಾಲೂಕಿನ ಮಾದನಹಿಪ್ಪರಗಾ ಗ್ರಾಮದ ಶ್ರೀ ಶಿವಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ಖೋ ಖೋ ತಂಡವೂ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ ಎಂದು ಯಶ್ವಂತ ಜೇಮಶೆಟ್ಟಿ ತಿಳಿಸಿದ್ದಾರೆ

Leave A Reply

Your email address will not be published.