Shubhashaya News

ಆಳಂದ: ಪ್ರಜಾಸೇವಾ ಜನಸ್ಪಂದನ ಅಭಿಯಾನಕ್ಕೆ ಪೂರ್ವಸಿದ್ಧತೆ;

ತಹಸೀಲ್ದಾರ ಅಣ್ಣಾರಾವ್ ಪಾಟೀಲ ಅಧ್ಯಕ್ಷತೆಯಲ್ಲಿ ಸಭೆ

ಆಳಂದ: ತಹಸೀಲ್ದಾರ ಕಚೇರಿಯಲ್ಲಿ ಪ್ರಜಾಸೇವಾ ಜನಸ್ಪಂದನ ಅಭಿಯಾನ ಪೂರ್ವ ಸಿದ್ಧತೆ ಸಭೆಯಲ್ಲಿ ತಹಸೀಲ್ದಾರ ಅಣ್ಣಾರಾವ್ ಪಾಟೀಲ ಮಾತನಾಡಿದರು. ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ, ಬಿಸಿಎಂ ಅಧಿಕಾರಿ ಗಜಾನಂದ ಬುಕ್ಕಾ ಇತರರು ಇದ್ದರು.

ಆಳಂದ: ರಾಜ್ಯ ಸರಕಾರದ ನಿರ್ದೇಶನದಂತೆ ಆಳಂದ ತಾಲೂಕಿನಲ್ಲಿ ಹಮ್ಮಿಕೊಳ್ಳಲಿರುವ ಪ್ರಜಾಸೇವಾ ಜನಸ್ಪಂದನ ಅಭಿಯಾನ ಕಾರ್ಯಕ್ರಮದ ಕುರಿತು ತಾಲೂಕು ಆಡಳಿತ ಸೌಧದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. ತಹಸೀಲ್ದಾರ ಅಣ್ಣಾರಾವ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ತಾಲ್ಲೂಕುಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.
ರಾಜ್ಯಾದ್ಯಂತ ಆಯೋಜಿಸಲಾಗುತ್ತಿರುವ ಪ್ರಜಾಸೇವಾ ಅಭಿಯಾನ ಸಭೆಗಳ ಸರಣಿಯ ಅಂಗವಾಗಿ ಆಳಂದ ತಾಲೂಕಿನಲ್ಲಿಯೂ ಈ ಕಾರ್ಯಕ್ರಮ ಆಯೋಜಿಸುವ ಉದ್ದೇಶದಿಂದ ಈ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ತಹಸೀಲ್ದಾರರು ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿ, ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಸಾರ್ವಜನಿಕ ಕುಂದುಕೊರತೆ ಪರಿಹಾರ ಸರಕಾರದ ಆದ್ಯತೆ
ಮಾತನಾಡಿದ ತಹಸೀಲ್ದಾರ ಅಣ್ಣಾರಾವ್ ಪಾಟೀಲ, ರಾಜ್ಯ ಸರಕಾರದ ಸುತ್ತೋಲೆಯನ್ವಯ ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ ಅವುಗಳಿಗೆ ಸಕಾಲದಲ್ಲಿ ಸೂಕ್ತ ಸಮಾಧಾನಕರ ಪರಿಹಾರ ನೀಡುವುದು ಸರಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು. ಅದರಂತೆ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಮಾನ್ಯ ಶಾಸಕರ ನೇತೃತ್ವದಲ್ಲಿ ಪ್ರತಿ ತಿಂಗಳ ಎಲ್ಲಾ ಶನಿವಾರಗಳಂದು ಪ್ರಜಾಸೇವಾ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.
ಅಭಿಯಾನದ ಅಡಿಯಲ್ಲಿ ಸಾರ್ವಜನಿಕರ ದೂರುಗಳನ್ನು ಸಂಬAಧಪಟ್ಟ ಇಲಾಖೆಗಳು ಗಂಭೀರವಾಗಿ ಪರಿಗಣಿಸಿ, ನಿಗದಿತ ಕಾಲಮಿತಿಯೊಳಗೆ ಪರಿಹಾರ ಒದಗಿಸಬೇಕು ಎಂದು ತಹಸೀಲ್ದಾರರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಇಲಾಖೆಗೆ ಸಂಬAಧಿಸಿದ ಮಾಹಿತಿ ಮತ್ತು ದಾಖಲೆಗಳೊಂದಿಗೆ ಸಿದ್ಧರಾಗಿ ಅಭಿಯಾನದ ದಿನದಂದು ಹಾಜರಿರಬೇಕು ಎಂದೂ ಅವರು ಸೂಚಿಸಿದರು.
ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ, ಗ್ರಾಪಂ ಆಡಳಿತಾಧಿಕಾರಿಗಳಾದ ತೋಟಗಾರಿಕೆ ಸಹಾಯಕ ನಿರ್ದೇಶಕ ಸುರೇಂದ್ರನಾಥ ಹೊನ್ನಪ್ಪಗೊಳ್ಳ, ಬಿಸಿಎಂ ಅಧಿಕಾರಿ ಗಜಾನಂದ ಬುಕ್ಕಾ ಮಾತನಾಡಿದರು.
ಈ ವೇಳೆ ಸಮಾಜ ಕಲ್ಯಾಣಾಧಿಕಾರಿ ವಿಜಲಕ್ಷಿö್ಮÃ ಕೋಳಕರ್, ಪ್ರಭಾರಿ ಗ್ರೇಡ್-೨ ತಹಸೀಲ್ದಾರ ಮಲ್ಲಿಕಾರ್ಜುನ ಪಾಟೀಲ, ತಾಪಂ ಇಒ ಮಹಾಂತೇಶ ಪುರಾಣಿಕ, ಆರೋಗ್ಯಾಧಿಕಾರಿ ಡಾ. ಉಸ್ಮಾನ ಸುತಾರ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Leave A Reply

Your email address will not be published.