ಕಲಬುರಗಿ: ಜಿಲ್ಲೆಯ ಮಲ್ಲಬಾದ ಏತ ನೀರಾವರು ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳು ಬೇಗನೆ ಪೂರ್ಣಗೊಳಿಸುವಂತೆ ಒತ್ತಾಯಿಸಿ ದಿನಾಂಕ 19 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ಬೃಹತ್ ಪಾದಯಾತ್ರೆ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಬಿ ಗದ್ದುಗೆ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಲಬುರಗಿ ಸುಕ್ಷೇತ್ರ ಗಾಣಗಾಪುರದ ದತ್ತಾತ್ರೇಯ ದೇವಾಲಯ ಹಾಗೂ ಶ್ರೀ ಭಾಗ್ಯವಂತಿ ದೇವಾಲಯ ಅಭಿವೃದ್ಧಿಪಡಿಸಬೇಕು.ಹಾಗೂ ಕಲಬುರಗಿ ಜಿಲ್ಲೆಯಲ್ಲಿ 371 ವಿಧಿಯ ಉಪ ಸಚಿವಾಲಯವನ್ನು ಅಧಿಕೃತವಾಗಿ ಸ್ಥಾಪಿಸಿ ಕೂಡಲೇ ಘೋಷಣೆ ಮಾಡಬೇಕು.ಮತ್ತು ಈಗಾಗಲೇ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮಳೆ ಇಲ್ಲದೇ ರೈತರು ಕಂಗಲಾಗಿದ್ದಾರೆ.ರಾಜ್ಯ ಸರಕಾರವು ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಪ್ರದೇಶ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಒತ್ತಾಯ ಮಾಡಲಾಗುವುದು.
ಈ ಬೃಹತ್ ಪಾದಯಾತ್ರೆಯಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ ಶೆಟ್ಟಿ ಭಾಗವಹಿಸುತ್ತಿದ್ದು,ಪಾದಯಾತ್ರೆಗೆ ರೈತಪರ ಸಂಘಟನೆಗಳು,ಬುದ್ದಿ ಜೀವಿಗಳು,ಕರವೇ ಕಾರ್ಯಕರ್ತರು ಹಾಗೂ ಕರವೇ ಸೇನಾನಿಗಳು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿಕೊಂಡರು.
Prev Post