Shubhashaya News

ಪ್ರಜಾಪ್ರಭುತ್ವದ ಆಶಯಗಳ ಅರಿವು ಯುವಜನರಲ್ಲಿ ಮೂಡಲಿ:

ಆಳಂದ: ತಾಲೂಕು ಆಡಳಿತನಲ್ಲಿ ಆಯೋಜಿಸಿದ್ದ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಗ್ರೇಡ್-೨ ತಹಸೀಲ್ದಾರ ಮಲ್ಲಿಕಾರ್ಜುನ ಪಾಟೀಲ ಉದ್ಘಾಟಿಸಿದರು. ವಿಜಲಕ್ಷಿö್ಮà ಹೊಳ್ಕರ್, ಪ್ರಭು ಮಡ್ಡಿತೋಟ್, ದಯಾನಂದ ಶೇರಿಕಾರ ಇತರರು ಇದ್ದರು.

ಆಳಂದ: ಪ್ರಜಾಪ್ರಭುತ್ವ ವ್ಯವಸ್ಥೆಯ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ನಾಗರಿಕರ ಹಕ್ಕು–ಕರ್ತವ್ಯಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಬಿಆರ್‌ಪಿ ಚಂದ್ರಶೇಖರ್ ಕಟ್ಟಿಮನಿ
ಹೇಳಿದರು.
ಪಟ್ಟಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಪ್ರಜಾಪ್ರಭುತ್ವವು ಕೇವಲ ಚುನಾವಣೆ ಹಾಗೂ ಮತದಾನಕ್ಕೆ ಸೀಮಿತವಾಗಿಲ್ಲ. ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ, ಸ್ವಾತಂತ್ರ‍್ಯ, ಹಕ್ಕು ಹಾಗೂ ನ್ಯಾಯ ದೊರೆಯುವ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ವಿದ್ಯಾರ್ಥಿಗಳು ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.
ಗ್ರೇಡ್–೨ ತಹಶೀಲ್ದಾರ್ ಮಲ್ಲಿಕಾರ್ಜುನ್ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಹೋಳ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಜಾಪ್ರಭುತ್ವದ ಬಲವರ್ಧನೆಗೆ ಯುವಜನರ ಪಾತ್ರ ಮಹತ್ವದ್ದಾಗಿದೆ. ಸಂವಿಧಾನ ನೀಡಿರುವ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ಅರಿತು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಸಮನ್ವಯಾಧಿಕಾರಿ ಅಣ್ಣಪ್ಪ ಹಾದಿಮನಿ ಅವರು, ಪ್ರಜಾಪ್ರಭುತ್ವದ ಮಹತ್ವ, ಸಂವಿಧಾನಾತ್ಮಕ ಮೌಲ್ಯಗಳು, ನಾಗರಿಕರ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ವಿವರಿಸಿದರು. ಸಂವಿಧಾನ ಪೀಠಿಕೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಿದ್ಯಾರ್ಥಿಗಳಿಗೆ ಸಂವಿಧಾನ ಪುಸ್ತಕ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜೆಸ್ಕಾಂ ಎಇಇ ಪ್ರಭು ಮಾಡಿತೋಟ, ಹಿರಿಯ ಮುಖಂಡ ದಯಾನಂದ್ ಶೇರಿಕಾರ್, ಮಲ್ಲಿಕಾರ್ಜುನ ಬೋಳಣಿ, ಜಯ ಕರವೇ ತಾಲೂಕು ಅಧ್ಯಕ್ಷ ಪ್ರವೀಣ ಮೊದಲೆ, ಆಕಾಶ ದೇಗಾಂವ, ಎಸಿಎಸ್ಟಿ ನೌಕರ ಸಂಘದ ಅಧ್ಯಕ್ಷ ರಮೇಶ ಪಾತ್ರೆದೈಹಿಕ ಶಿಕ್ಷಣ ಉಪನ್ಯಾಸಕ ಡಾ. ಶಂಕರ್, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಅಣವೀರ್, ಸಮಾಜ ಕಲ್ಯಾಣ ಇಲಾಖೆಯ ರಮೇಶ್ ವಾಗ್ದರ್ಗಿ, ನಿಂಗಣ್ಣ ದೊಡ್ಡಮನಿ, ಸಿದ್ಧರಾಮ ವಡಗಾಂವ, ಗುಂಡೇರಾವ್ ವಾರ್ಡನ್, ಆಶಾ, ನಶ್ರೀನ್, ಪಾರ್ವತಿ, ಇಂದುಬಾಯಿ, ಅಶ್ವಿನಿ, ಸುವರ್ಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸರ್ಕಾರಿ ಡಿಗ್ರಿ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಈ ಮೊದಲು ಅಧಿಕಾರಿಗಳಿಂದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ವಿಶ್ವಗುರು ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಕೈಗೊಳ್ಳಲಾಯಿತು.
ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಸಂತೋಷ್ ಶಿಂದೆ ಕಾರ್ಯಕ್ರಮ ನಿರೂಪಿಸಿದರು. ಗುಂಡೇರಾವ್ ಗುಬ್ಬ್ಯಾಡ ವಂದಿಸಿದರು.

Leave A Reply

Your email address will not be published.