Shubhashaya News

ವಿಶ್ವಕರ್ಮ ಕುಶಲಕರ್ಮಿಗಳಿಗೆ ಸರ್ಕಾರದ ಬೆಂಬಲಕ್ಕೆ ಶ್ರೀಶೈಲ ಸುತಾರ ಆಗ್ರಹ

ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ಆಳಂದ: ಪಟ್ಟಣದ ತಾಲೂಕು ಆಡಳಿತ ಆಚರಿಸಿದ ವಿಶ್ವಕರ್ಮರ ಜಯಂತಿ ಕಾರ್ಯಕ್ರಮದಲ್ಲಿ ಶ್ರೀಶೈಲ ಸುತಾರ ಮುನ್ನೊಳ್ಳಿ ಮಾತನಾಡಿದರು. ತಹಸೀಲ್ದಾರ ಅಣ್ಣಾರಾವ್ ಪಾಟೀಲ, ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ, ಪ್ರಭು ಮಡ್ಡಿತೋಟ್, ಬಸವರಾಜ ತಡಕಲ್ ಇತರರು ಇದ್ದರು.

ಆಳಂದ: ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಶ್ರೀ ಭಗವಾನ್ ವಿಶ್ವಕರ್ಮರ ಜಯಂತಿ ಕಾರ್ಯಕ್ರಮವನ್ನು ಸಂಭ್ರಮದಿAದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿದ್ದ ವಿಶ್ವಕರ್ಮ ಸಮಾಜದ ತಾಲೂಕು ಹಿರಿಯ ಮುಖಂಡ ಶ್ರೀಶೈಲ ಸುತಾರ ಮುನ್ನೊಳ್ಳಿ ಅವರು ಮಾತನಾಡಿ, ದೇಶದ ಪ್ರಗತಿಯಲ್ಲಿ ವಿಶ್ವಕರ್ಮರ ಕೊಡುಗೆ ಅಪಾರವಾಗಿದ್ದರೂ, ಬದಲಾದ ಕಾಲಘಟ್ಟದಲ್ಲಿ ಕುಶಲಕರ್ಮಿಗಳ ಉದ್ಯೋಗ ಅಳಿವಿನಂಚಿಗೆ ತಲುಪಿರುವುದು ಆತಂಕಕಾರಿ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರ ಸಂಬAಧಿತ ನಿಗಮಕ್ಕೆ ಹೆಚ್ಚಿನ ಅನುದಾನ ನೀಡುವ ಮೂಲಕ ವಿಶ್ವಕರ್ಮರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಬೆಂಬಲ ನೀಡಬೇಕೆಂದು ಒತ್ತಾಯಿಸಿದರು. ಸಮಾಜ ಬಾಂಧವರು ಸಂಘಟಿತರಾಗಿ ಸರ್ವರಂಗದಲ್ಲೂ ಅಭಿವೃದ್ಧಿ ಹೊಂದಬೇಕೆAದು ಕರೆ ನೀಡಿದರು.
ಉಪನ್ಯಾಸಕಿ ನಂದಿನಿ ಎಸ್. ಶೇರಿ ಅವರು ಕಲ್ಯಾಣ ಕರ್ನಾಟಕ ಉತ್ಸವದ ಮಹತ್ವ ಕುರಿತು ಮಾತನಾಡಿದರೆ, ಶಿಕ್ಷಕಿ ಶೋಭಾ ಸುತಾರ ಅವರು ವಿಶ್ವಕರ್ಮರ ಇತಿಹಾಸ ಹಾಗೂ ಪರಂಪರೆ ಕುರಿತು ಬೆಳಕು ಚೆಲ್ಲಿದರು.
ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಮಾತನಾಡಿ, ನಿಜಾಮನ ಆಳ್ವಿಕೆಯಲ್ಲಿದ್ದ ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಸ್ವತಂತ್ರ ಭಾರತದಲ್ಲಿ ವಿಲೀನಗೊಳಿಸಲು ಅನೇಕ ಮಹನೀಯರು ತ್ಯಾಗ, ಬಲಿದಾನ ಮಾಡಿದ್ದು ಸ್ಮರಣೀಯ ಎಂದರು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿ ಅಭಿವೃದ್ಧಿ ಸಾಧಿಸಬೇಕಿದೆ ಎಂದು ಹೇಳಿದರು.
ರಾಷ್ಟçಧ್ವಜಾರೋಹಣ ನೆರವೇರಿಸಿ ವೇದಿಕೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ ಅಣ್ಣಾರಾವ್ ಪಾಟೀಲ ಅವರು ಮಾತನಾಡಿ, ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶಕ್ಕಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿಯನ್ನೇ ಗುರಿಯನ್ನಾಗಿಸಬೇಕೆಂದು ಹಾಗೂ ವಿಶ್ವಕರ್ಮರ ತತ್ವಾದರ್ಶಗಳನ್ನು ಪಾಲಿಸಬೇಕೆಂದು ಕರೆ ನೀಡಿದರು.
ವೇದಿಕೆಯಲ್ಲಿ ಜೆಸ್ಕಾಂ ಎಇಇ ಪ್ರಭು ಮಡ್ಡಿತೋಟ, ವಿಶ್ವಕರ್ಮ ಸಮಾಜ ಅಧ್ಯಕ್ಷ ಬಸವರಾಜ ತಡಕಲ್ ಉಪಸ್ಥಿತರಿದ್ದರು. ಡಾ. ರಾಜಕುಮಾರ ಸುತಾರ, ಕಾಳಿಕಾದೇವಿ ಟ್ರಸ್ಟ್ ಅಧ್ಯಕ್ಷ ಮಹಾದೇವ ಪೋದ್ದಾರ, ಸಿಡಿಪಿಒ ಶಂಭುಲಿAಗ ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಸಂತೋಷ ಶಿಂಧೆ, ದೈಹಿಕ ಶಿಕ್ಷಣಾಧಿಕಾರಿ ಅರವಿಂದ ಭಾಸಗಿ, ರಾಕೇಶ ಶಿಲವಂತ, ಶರಣಬಸಪ್ಪ ಹಕ್ಕಿ, ಆನಂದ ಪೂಜಾರಿ, ದೇವಿಂದ್ರಪ್ಪ ಮಾಸ್ಟರ್ ಸೇರಿದಂತೆ ಸಮಾಜ ಬಾಂಧವರು ಹಾಗೂ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಶಿಕ್ಷಕ ಕಲ್ಯಾಣಪ್ಪ ಬಿಜ್ಜರಗಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Leave A Reply

Your email address will not be published.