Shubhashaya News

ರಾಜ್ಯಮಟ್ಟದ ಶ್ರೀ ವಾಲ್ಮೀಕಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ: ಪ್ರತಿ ವರ್ಷದಂತೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ 2026ನೇ ಸಾಲಿನಲ್ಲಿ ರಾಜ್ಯಮಟ್ಟದ ಶ್ರೀ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಅರ್ಹ ವ್ಯಕ್ತಿಗಳು ಈ ಪ್ರಶಸ್ತಿಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ 2026ರ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನಸೌಧ ಎದುರಿಗೆ ಇರುವ ಐವಾನ್ ಶಾಹಿ ರಸ್ತೆಯಲ್ಲಿನ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Leave A Reply

Your email address will not be published.