Shubhashaya News

ಮಕ್ಕಳು ಚೆನ್ನಾಗಿ ಅಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಡಾ. ದಾಕ್ಷಾಯಿಣಿ ಅವ್ವಾಜಿ

ಕಲಬುರಗಿ: ಇಂದಿನ ಮಕ್ಕಳು ನಾಳೆಯ ಪ್ರಜೆಗಳು ಎನ್ನುವಂತೆ ಮಕ್ಕಳೆಲ್ಲರೂ ಮನಸ್ಸಿಟ್ಟು ಚೆನ್ನಾಗಿ ಅಭ್ಯಾಸ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿಯವರು ಕರೆ ನೀಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿಯಲ್ಲಿರುವ, ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿರುವ, ಶರಣಬಸವೇಶ್ವರ ಸಂಯುಕ್ತ ಪ್ರೌಢ ಶಾಲೆಯಲ್ಲಿ “ಯುಥ್ ಫಾರ್ ಸೇವಾ” ವತಿಯಿಂದ ಮಕ್ಕಳಿಗೆ ಶಾಲಾ ಕಿಟ್ ವಿತರಣಾ ಸಮಾರಂಭದಲ್ಲಿ ಮಹಾದೇವಿ ಕನ್ಯಾ ಶಾಲಾ ಮಕ್ಕಳಿಗೆ ಶಾಲಾ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಲಿಂಗೈಕ್ಯ ಪೂಜ್ಯ ದೊಡಪ್ಪ ಅಪ್ಪಾಜಿಯವರು ಸ್ಥಾಪಿಸಿದ ಹಾಗೂ ಶಾಲಾ ಶಿಕ್ಷಣವನ್ನು ವಿಶ್ವವಿದ್ಯಾಲಯದ ಮಟ್ಟಕ್ಕೆ ಕೊಂಡೊಯ್ದ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಆಸೆಯಂತೆ ನೀವೆಲ್ಲರೂ ಮುಂದೊoದು ದಿನ ಡಾಕ್ಟರ್, ಇಂಜಿನಿಯರ್ ಹಾಗೂ ಶಿಕ್ಷಕರಾಗಬೇಕೆಂಬುದೇ ನನ್ನ ಬಯಕೆಯಾಗಿದೆ ಎಂದರು.

“ಯುಥ್ ಫಾರ್ ಸೇವಾ” ಸಂಸ್ಥೆಯವರು ವಿದ್ಯಾರ್ಥಿ ಮಕ್ಕಳಿಗೆ ಶಾಲಾ ಕಿಟ್ ವಿತರಿಸಿರುವುದು ಅತೀವ ಸಂತೋಷ ತಂದಿದೆ. ಈ ಸಮಾಜ ಕಾರ್ಯ ಯಶಸ್ವಿಯಾಗಿ ಮುನ್ನಡೆಯಲಿ. ಆಯ್ದ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶೀಪ್ ಕೊಡುವುದು, ಶಾಲಾ ಮಕ್ಕಳಿಗೆ ಶಾಲಾ ಕಿಟ್ ನೀಡುವುದು, ಶಾಲೆಗೆ ಸ್ಮಾರ್ಟ್ ಬೋರ್ಡ ಕೊಡುವುದು ಶ್ಲಾಘನೀಯವಾಗಿದೆ ಎಂದು ಕೊಂಡಾಡಿದರು.
ಸಮಾರoಭದಲ್ಲಿ ಸುಮಾರು 150 ವಿದ್ಯಾರ್ಥಿಗಳಿಗೆ ಶಾಲಾ ಕಿಟ್‌ಗಳನ್ನು ವಿತರಿಸಲಾಯಿತು. ಯುಥ್ ಫಾರ್ ಸೇವಾ ಸಂಸ್ಥೆಯ ಸಲಹಾ ಸಮಿತಿಯ ಅಧ್ಯಕ್ಷ ಮಹೇಶ ದೇಶಪಾಂಡೆ, ಸದಸ್ಯರಾದ ಪ್ರಹ್ಲಾದ್ ಪೂಜಾರಿ, ಶ್ರೀಪಾದ, ಸಂಚಾಲಕ ಮಲ್ಲಿಕಾರ್ಜುನ್ ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಪ್ರಾಧ್ಯಾಪಕರು ವೇದಿಕೆ ಮೇಲಿದ್ದರು.

Leave A Reply

Your email address will not be published.