Shubhashaya News

ಜೋಕುಮಾರ ಸ್ವಾಮಿ ಆಚರಣೆಗೆ 51 ಸಾವಿರ ಗೌರವಧನ ನೀಡಲು ಆಗ್ರಹ

ಕಲಬುರಗಿ: ಬುಡಕಟ್ಟು ಸಮುದಾಯಗಳ ಸಾಂಸ್ಕೃತಿಕ ಸಾಹಿತ್ಯ ಪರಿಷತ್ ವತಿಯಿಂದ ಕೋಲಿ, ಕಬ್ಬಲಿಗ, ಬೆಸ್ತ, ಟೋಕರಿಕೋಲಿ, ವಾಲಿಕಾರ, ತಳವಾರ, ಜಮಾದಾರ, ನಾಯಿಕೋಡಿ, ನಾಟಿಕಾರ ಸೇರಿದಂತೆ ವಿವಿಧ ಬುಡಕಟ್ಟು ಸಮುದಾಯಗಳು ತಲೆತಲಾಂತರದಿoದ ಆಚರಿಸಿಕೊಂಡು ಬರುತ್ತಿರುವ ಜೋಕುಮಾರ ಸ್ವಾಮಿ ಉತ್ಸವಕ್ಕೆ ಸರ್ಕಾರದಿಂದ ಪ್ರೋತ್ಸಾಹ ನೀಡಬೇಕು ಎಂದು ಆಗ್ರಹಿಸಿ ಬುಡಕಟ್ಟು ಸಮುದಾಯಗಳ ಸಾಂಸ್ಕೃತಿಕ ಸಾಹಿತ್ಯ ಪರಿಷತ್ ವತಿಯಿಂದ ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಗಜಾನನ ಉತ್ಸವದ ನಂತರ ಸಾಂಪ್ರದಾಯಿಕವಾಗಿ ಆಚರಿಸುವ ಜೋಕುಮಾರ ಸ್ವಾಮಿ ಉತ್ಸವದಲ್ಲಿ ಮಣ್ಣಿನಿಂದ ತಯಾರಿಸಿದ ಜೋಕುಮಾರ ಸ್ವಾಮಿಯ ಮೂರ್ತಿಯನ್ನು ಮರದ ಬುಟ್ಟಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಬುಡಕಟ್ಟು ಸಮುದಾಯದ ಹೆಣ್ಣುಮಕ್ಕಳು ಮನೆ ಮನೆಗೆ ತೆರಳಿ ಜೋಕುಮಾರ ಸ್ವಾಮಿಯ ಹಾಡುಗಳನ್ನು ಹಾಡಿ, ಪ್ರತಿಯಾಗಿ ದವಸ-ಧಾನ್ಯಗಳನ್ನು ಸ್ವೀಕರಿಸುವ ಸಂಪ್ರದಾಯವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಇಂತಹ ಸಮುದಾಯಕ್ಕೆ ಕನಿಷ್ಠ 51 ಸಾವಿರ ಗೌರವ ನೀಡಬೇಕು ಎಂದು ಆಗ್ರಹ ಮಾಡಿದರು.

ಈ ಸಮುದಾಯಗಳ ಅನೇಕ ಕುಟುಂಬಗಳು ಆರ್ಥಿಕವಾಗಿ ಹಿಂದುಳಿದಿದ್ದು, ಶಿಕ್ಷಣ, ಉದ್ಯೋಗ, ಆರೋಗ್ಯ ಸೇರಿದಂತೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆದ್ದರಿಂದ ಅರ್ಹರಿಗೆ ಜಾತಿ ಮತ್ತು ಸಿಂಧುತ್ವ ಪ್ರಮಾಣಪತ್ರಗಳನ್ನು ಯಾವುದೇ ಅಡೆತಡೆಯಿಲ್ಲದೆ ಒದಗಿಸಿ, ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಡಾ.ಟಿ.ಡಿ.ರಾಜ್, ಪ್ರೊ. ಎಲ್ ಬಿ.ಹಿಟ್ಟಿನ್, ಶ್ರೀದೊಡ್ಲ ಪಂಡರಿ, ಮಲ್ಲಿಕಾರ್ಜುನ ಕಲಬೇನ್ನೂರ ವಕೀಲರು, ಬಾಬುರಾವ ಜಮಾದಾರ ಸೇರಿದಂತೆ ಇತರರು ಇದ್ದರು.

Leave A Reply

Your email address will not be published.