Shubhashaya News

ಅಫಜಲಪುರ: ಗೊಬ್ಬುರ(ಬಿ) ಹೊರವಲಯದಲ್ಲಿ ಯುವಕನ ಶವ ಪತ್ತೆ

ಅಫಜಲಪುರ: ತಾಲೂಕಿನ ಗೊಬ್ಬುರ(ಬಿ) ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಸುಮಾರು 22 ವರ್ಷದ ಖಲೀಂ ಸಾಬ್ ಎಂಬ ಯುವಕನ ಶವ ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಯುವಕನ ಮೃತದೇಹವು ಕೈ ಹಾಗೂ ರುಂಡ ಕತ್ತರಿಸಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave A Reply

Your email address will not be published.