Shubhashaya News

ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ; ಸೆ.2 9ರ ವರೆಗೆ ಮತಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶ: ಇಕ್ರಮ್ ಶರೀಫ್

ಕಲಬುರಗಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಘೋಷಣೆ ಮಾಡಿದ್ದು, ಅರ್ಹ ಶಿಕ್ಣಕ ಮತದಾರರು ಸೆ.29ರ ವರೆಗೆ ಮತಪಟ್ಟಿಯಲ್ಲಿ ಹೆಸರಿ ಸೇರಿಸಲು ಅವಕಾಶ ಕಲ್ಪಿಸಿದೆ ಎಂದು ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿರುವ ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

ನಿಗಧಿಯ ನಮೂನೆ-19 ಭರ್ತಿ ಮಾದಿ ಅದರೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಸಹಾಯಕ ಮತದಾರೆ ನೋಂದಣಾಧಿಕಾರಿಗಳ ಕಚೇರಿಯಾಗಿರುವ ಜಿಲ್ಲಾಧಿಕಾರಿಗಳ ಕಚೇರಿ, ಕಲಬುರಗಿ ಮಹಾನಗರ ಪಾಲಿಕೆ ಕಚೇರಿ, ಕಲಬುರಗಿ ಮತ್ತು ಸೇಡಂ ಸಹಾಯಕ ಆಯುಕ್ತರ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದಿದ್ದಾರೆ.

ಕ್ಷೇತ್ರದ ಚುನಾವಣೆಗೆ ಇದೇ ಸೆಪ್ಟೆಂಬರ್ 29 ರಂದು ಚುನಾವಣಾಧಿಕಾರಿಗಳಿಂದ ಅಧಿಸೂಚನೆ ಹೊರಡಿಸಲಾಗುತ್ತದೆ. ಸೆ.29 ರಿಂದ ಅ.6ರ ವರೆಗೆ (ಸರ್ಕಾರಿ ರಜಾ ದಿನ ಹೊರತುಪಡಿಸಿ) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಅಕ್ಟೋಬರ್ 7 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನವಾಗಿರುತ್ತದೆ. ಇನ್ನು ಮತದಾನ ಅಕ್ಟೋಬರ್ 23 (ಶುಕ್ರವಾರ) ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ನಡೆಯಲಿದ್ದು, ಮತ ಎಣಿಕೆ ಕಾರ್ಯ ಅಕ್ಟೋಬರ್ 27 (ಮಂಗಳವಾರ) ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ವೇಳಾಪಟ್ಟಿ ಕುರಿತು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಾದ್ಯಂತ ಎಂ.ಸಿ.ಸಿ. ಜಾರಿ:

ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಘೋಷಣೆ ಮಾಡಿದ್ದರಿಂದ ತಕ್ಷಣದಿಂದಲೆ ಜಾರಿಗೆ ಬರುವಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಲಬುರಗಿ ಜಿಲ್ಲಾಯದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಗಳಾಗಿರುವ ಡಿ.ಸಿ. ಇಕ್ರಮ್ ಶರೀಫ್ ತಿಳಿಸಿದ್ದಾರೆ.

Leave A Reply

Your email address will not be published.