Shubhashaya News

BREAKING : ರಾಜ್ಯದಲ್ಲಿ ನಂದಿನಿ ಹಾಲು ದರ ಏರಿಕೆ ಸಾಧ್ಯತೆ: ಲೀಟರ್‌ಗೆ ₹10 ಹೆಚ್ಚಳಕ್ಕೆ ‘KMF’ ಆಗ್ರಹ .

ರಾಜ್ಯದಲ್ಲಿ ನಂದಿನಿ ಹಾಲಿನ ಪ್ರತಿ ಲೀಟರ್ ಬೆಲೆಯಲ್ಲಿ 4 ರಿಂದ 5 ರೂಪಾಯಿ ಏರಿಕೆಯಾಗುವ ಸಾಧ್ಯತೆಯಿದೆ. ಆದರೆ, ಹಾಲಿನ ದರವನ್ನು ಪ್ರತಿ ಲೀಟರ್‌ಗೆ 10 ರೂಪಾಯಿಗಳಷ್ಟು ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರಕಾರವನ್ನು ಒತ್ತಾಯಿಸಿವೆ. ಈ ಕುರಿತು ಹಾಲು ಒಕ್ಕೂಟದ ಅಧ್ಯಕ್ಷರೆಲ್ಲರೂ ಸೇರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಧಿಕೃತ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಸಂಕಷ್ಟದಲ್ಲಿರುವ ಹಾಲಿನ ಉತ್ಪಾದಕ ರೈತರನ್ನು ಕಾಪಾಡುವ ಉದ್ದೇಶದಿಂದ ಈ ಬೆಲೆ ಏರಿಕೆ ನಿರ್ಧಾರಕ್ಕೆ ಬರಲಾಗಿದೆ ಎಂದು ಬೆಂಗಳೂರು ಹಾಲು ಒಕ್ಕೂಟದ (ಬಮುಲ್) ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ಬೆಲೆ ಏರಿಕೆಯ ಕುರಿತು ವಿವರಣೆ ನೀಡಿದ ಡಿ.ಕೆ. ಸುರೇಶ್, ಪ್ರತಿ ಲೀಟರ್‌ಗೆ ಹೆಚ್ಚಿಸುವ 10 ರೂಪಾಯಿ ಪೈಕಿ 7 ರೂಪಾಯಿಯನ್ನು ನೇರವಾಗಿ ರೈತರಿಗೆ ನೀಡಬೇಕು ಹಾಗೂ ಉಳಿದ 3 ರೂಪಾಯಿಯನ್ನು ನಷ್ಟದಲ್ಲಿರುವ ಹಾಲು ಒಕ್ಕೂಟಗಳ ನಿರ್ವಹಣೆಗೆ ನೀಡಬೇಕು ಎಂದು ಸಿಎಂ ಬಳಿ ಮನವಿ ಮಾಡಲಾಗಿದೆ. ಒಕ್ಕೂಟಗಳ ಆರ್ಥಿಕ ಹಿತದೃಷ್ಟಿಯಿಂದ ಸರಕಾರ ನೆರವಾಗಬೇಕೆಂದು ಕೋರಲಾಗಿದ್ದು, ಈ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

Leave A Reply

Your email address will not be published.