Shubhashaya News

ಗುತ್ತೇದಾರ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ ತೃತೀಯ ಸ್ಥಾನ

ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ವಿಜಯಲಕ್ಷಿö್ಮÃ ಲಕ್ಷಿö್ಮÃಕಾಂತ ಪೊದ್ದಾರ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದುದ್ದಕ್ಕೆ ಸಂಸ್ಥೆಯ ಅಧ್ಯಕ್ಷ ಸುಭಾಷ್ ಆರ್ ಗುತ್ತೇದಾರ ಸನ್ಮಾನಿಸಿದರು. ಹಣಮಂತ ಶೇರಿ, ಡಾ. ಅಪ್ಪಾಸಾಬ ಬಿರಾದಾರ, ಅಶೋಕರೆಡ್ಡಿ, ಜ್ಯೋತಿ ವಿಶಾಖ್ ಸೇರಿದಂತೆ ಇತರರು ಇದ್ದರು.

ಆಳಂದ ಪಟ್ಟಣದ ಪ್ರತಿಷ್ಟಿತ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ವಿಜಯಲಕ್ಷಿö್ಮÃ ಲಕ್ಷಿö್ಮÃಕಾಂತ ಪೊದ್ದಾರ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ ಮರೆದಿದ್ದಾಳೆ.
ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ) ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಷ್ಟçಪಿತ ಮಹಾತ್ಮಾ ಗಾಂಧಿ ಅವರ ೧೫೭ನೇ ಜಯಂತಿ ಅಂಗವಾಗಿ ಏರ್ಪಡಿಸಿದ್ದ “ ಬಾಪೂಜಿ ಪ್ರಬಂಧ ಸ್ಪರ್ಧೆ” ಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಳು. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾಳೆ.
ಅ.೨ ರಂದು ಗಾಂಧಿ ಜಯಂತಿಯAದು ಬೆಂಗಳೂರಿನಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವುಕುಮಾರ ಅವರು ನಗದು ೧೧ ಸಾವಿರ ಹಾಗೂ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ, ಕಾರ್ಯದರ್ಶಿ ಹರ್ಷಾ ಎಸ್ ಗುತ್ತೇದಾರ, ಆಡಳಿತಾಧಿಕಾರಿ ಹಣಮಂತ ಶೇರಿ, ಪ್ರಾಚಾರ್ಯ ಡಾ. ಅಪ್ಪಾಸಾಬ ಬಿರಾದಾರ, ಡಾ. ಅಶೋಕರೆಡ್ಡಿ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಜ್ಯೋತಿ ವಿಶಾಖ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Leave A Reply

Your email address will not be published.