Shubhashaya News

ನಮೋಶಿ ಪರ ಕಂದಗೂಳೆ ಮತಯಾಚನೆ

ಆಳಂದ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ನಮೋಶಿ ಅವರ ಪರವಾಗಿ  ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ಅವರು ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರಲ್ಲಿ ಮತಯಾಚಿಸಿದರು.

ಚಿತಲಿ, ಖಜೂರಿ, ಆಳಂಗಾ, ತಡೋಳಾ, ಖಂಡಾಳ, ಹೊದಲೂರ, ರುದ್ರವಾಡಿ ಹಾಗೂ ಕಿಣ್ಣಿಸುಲ್ತಾನ ಗ್ರಾಮಗಳ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದ ಮುಖಂಡರು, ಶಿಕ್ಷಕರನ್ನು ನೇರವಾಗಿ ಭೇಟಿಯಾಗಿ ಅಭ್ಯರ್ಥಿ  ನಮೋಶಿ ಅವರ ಪರವಾಗಿ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಶಿಕ್ಷಕರ ಸಮಸ್ಯೆಗಳು ಹಾಗೂ ಶೈಕ್ಷಣಿಕ ಕ್ಷೇತ್ರದ ವಿವಿಧ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ  ನಮೋಶಿ ಅವರ ಅಭ್ಯರ್ಥಿತ್ವಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಶಿಕ್ಷಕರ ಹಿತಾಸಕ್ತಿ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಮತದಾರರೊಂದಿಗೆ ಚರ್ಚಿಸಿದರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಶಿಕ್ಷಕರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು ಹಾಗೂ ನಿರೀಕ್ಷೆಗಳನ್ನು ಆಲಿಸಲಾಯಿತು. ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಮೋಶಿ ಅವರ ಪರವಾಗಿ ಬೆಂಬಲ ಕ್ರೋಢೀಕರಿಸುವ ನಿಟ್ಟಿನಲ್ಲಿ ಮುಖಂಡರು ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಹೋಬಳಿಯ ಬಿಜೆಪಿ ಮುಖಂಡರು, ಸ್ಥಳೀಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave A Reply

Your email address will not be published.