Shubhashaya News

ನಮೋಶಿ ಪರ ಮಲ್ಲಿನಾಥ ಪರೇಣಿ ಮತಯಾಚನೆ

ಆಳಂದ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ನಮೋಶಿ ಅವರ ಪರವಾಗಿ ಬಿಜೆಪಿ ಮುಖಂಡ ಮಲ್ಲಿನಾಥ ಪರೇಣಿ ಅವರು ತಾಲೂಕಿನ ವಿವಿಧ ಗ್ರಾಮಗಳ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಶಿಕ್ಷಕರಲ್ಲಿ ಮತಯಾಚಿಸಿದರು.

ಮಾದನಹಿಪ್ಪರ್ಗಾ, ನಿಂಬಾಳ, ಮದಗುಣಕಿ ಹಾಗೂ ಹಡಲಗಿ ಗ್ರಾಮಗಳ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಭೇಟಿ ನೀಡಿದ ಮಲ್ಲಿನಾಥ ಪರೇಣಿ ಅವರು, ಶಿಕ್ಷಕರು ಹಾಗೂ ಮತದಾರರನ್ನು ಭೇಟಿಯಾಗಿ ನಮೋಶಿ ಅವರ ಪರವಾಗಿ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಿಕ್ಷಕರ ಸಮಸ್ಯೆಗಳು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಹಾಗೂ ಶಿಕ್ಷಕರ ಹಿತಾಸಕ್ತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅಭ್ಯರ್ಥಿಯ ಪರವಾಗಿ ಮತದಾರರಲ್ಲಿ ಮನವರಿಕೆ ಮಾಡಿಕೊಟ್ಟರು. ಶಿಕ್ಷಕರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಮೋಶಿ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದ ವೇಳೆ ಶಿಕ್ಷಕರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು ಮತ್ತು ನಿರೀಕ್ಷೆಗಳನ್ನು ಆಲಿಸಲಾಯಿತು. ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಮೋಶಿ ಅವರ ಪರವಾಗಿ ಬೆಂಬಲ ಕೋರಿ ಪ್ರಚಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಂಬರ್ಗಾ ಹಾಗೂ ಮಾದನಹಿಪ್ಪರ್ಗಾ ಹೋಬಳಿಯ ಬಿಜೆಪಿ ಮುಖಂಡರು, ಸ್ಥಳೀಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave A Reply

Your email address will not be published.