Shubhashaya News

ನಮೋಶಿ ಪರ ಶರಣು ಕುಮಸಿ ಮತಯಾಚನೆ

ಆಳಂದ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ  ನಮೋಶಿ ಅವರ ಪರವಾಗಿ ಬಿಜೆಪಿ ಮುಖಂಡ ಶರಣು ಕುಮಸಿ ಅವರು ತಾಲೂಕಿನ ವಿವಿಧ ಗ್ರಾಮಗಳ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಶಿಕ್ಷಕರಲ್ಲಿ ಮತಯಾಚಿಸಿದರು.

ನರೋಣಾ, ಗೋಳಾ ಬಿ, ಚಿಂಚನಸೂರ, ಶ್ರೀಚಂದ, ಅಂಬಲಗಾ, ನೆಲ್ಲೂರ ಹಾಗೂ ಗುಂಜಬಬಲಾದ ಗ್ರಾಮಗಳ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಭೇಟಿ ನೀಡಿದ ಶರಣು ಕುಮಸಿ ಅವರು, ಶಿಕ್ಷಕರನ್ನು ಭೇಟಿಯಾಗಿ ಅಭ್ಯರ್ಥಿ ನಮೋಶಿ ಅವರ ಪರವಾಗಿ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿಕ್ಷಕರ ವಿವಿಧ ಸಮಸ್ಯೆಗಳು, ಶೈಕ್ಷಣಿಕ ಕ್ಷೇತ್ರದ ಅಗತ್ಯತೆಗಳು ಹಾಗೂ ಶಿಕ್ಷಕರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಕುರಿತು ಮತದಾರರೊಂದಿಗೆ ಚರ್ಚಿಸಲಾಯಿತು. ಶಿಕ್ಷಕರ ಬೇಡಿಕೆಗಳಿಗೆ ಸ್ಪಂದಿಸುವ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ನಮೋಶಿ ಅವರನ್ನು ಬೆಂಬಲಿಸುವಂತೆ ಶರಣು ಕುಮಸಿ ಮನವಿ ಮಾಡಿದರು.

ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಂವಾದ ನಡೆಸಿದ ಅವರು, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಮೋಶಿ ಅವರ ಪರವಾಗಿ ಬೆಂಬಲ ಕೋರಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave A Reply

Your email address will not be published.