Shubhashaya News

ಕಮ್ಯೂನಿಸ್ಟ್ರ ಪಾದಯಾತ್ರೆ ಪ್ರತಿಭಟನೆಗೆ ಮುಖ್ಯಾಧಿಕಾರಿ ಸ್ಪಂದನೆ

ಡಿಸೆAಬರನಲ್ಲಿ ಆಳಂದ ನಿತ್ಯ ನೀರು ಪೂರೈಕೆಗೆ ಕ್ರಮ: ಪನಶೆಟ್ಟಿ ಭರವಸೆ

ಆಳಂದ: ತಾಪಂ ಕಚೇರಿ ಮುಂದೆ ನಡೆದ ಸಿಪಿಐ ಕಿಸಾನಸಭಾ ಪ್ರತಿಭಟನೆ ಸ್ಥಳದಲ್ಲಿ ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಅವರಿಗೆ ಆಶ್ಫಾಕ್ ಮುಲ್ಲಾ, ಧರ್ಮಣ್ಣಾ ಪೂಜಾರಿ ಇತರ ಮುಖಂಡರು ಮನವಿ ಸಲ್ಲಿಸಿದರು.

ಆಳಂದ: ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಸಿಪಿಐ, ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಹಾಗೂ ಭಾರತೀಯ ಖೇತ ಮಜದೂರ್ ಯೂನಿಯನ್ (ಬಿಕೆಎಂಯು) ವತಿಯಿಂದ ಕೈಗೊಂಡಿದ್ದ ಸರಣಿ ಹೋರಾಟದ ಭಾಗವಾಗಿ ಸರಸಂಬದಿAದ ಆರಂಭವಾದ ಪಾದಯಾತ್ರೆ ಹೆಬ್ಬಳಿಯಲ್ಲಿ ವಾಸ್ತವ್ಯ ಮಾಡಿ, ಶನಿವಾರ ಆಳಂದ ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನಾ ಧರಣಿಯಾಗಿ ಮುಂದುವರಿಯಿತು.
ಪ್ರತಿಭಟನಾಕಾರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ, ಬಳಿಕ ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ, ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಕುರಿತು ವಿವರವಾಗಿ ಚರ್ಚಿಸಿದರು.
ಪಟ್ಟಣದಲ್ಲಿ ಪ್ರಸ್ತುತ ೧೦ರಿಂದ ೧೫ ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಹಲವು ಬಡಾವಣೆಗಳಲ್ಲಿ ಕೊಳವೆಬಾವಿ ಹಾಗೂ ನೀರು ಪೂರೈಕೆ ವ್ಯವಸ್ಥೆಯಲ್ಲಿ ದುರಸ್ತಿ ಕಾರ್ಯ ಕೈಗೊಳ್ಳದ ಪರಿಣಾಮ ಜನರು ನೀರಿಗಾಗಿ ಪರದಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಮುಖ್ಯಾಧಿಕಾರಿಗಳ ಗಮನಕ್ಕೆ ತಂದರು.
ಇದಕ್ಕೆ ಸ್ಪಂದಿಸಿದ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಅವರು, ಆಳಂದ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಮೃತ್ ಯೋಜನೆಯ ಕಾಮಗಾರಿಯನ್ನು ಡಿಸೆಂಬರ್ ಮೊದಲ ವಾರದೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಕಾಮಗಾರಿ ಪೂರ್ಣಗೊಂಡ ಬಳಿಕ ಎಲ್ಲ ಬಡಾವಣೆಗಳಿಗೂ ನಿತ್ಯ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಅಮೃತ್ ಯೋಜನೆಯ ಕಾಮಗಾರಿ ಪೂರ್ಣಗೊಳ್ಳುವವರೆಗೆ ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ಕೊಳವೆಬಾವಿಗಳ ದುರಸ್ತಿ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು. ಲಭ್ಯವಿರುವ ನೀರಿನ ಮೂಲಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಜನರಿಗೆ ಕುಡಿಯುವ ನೀರಿನ ತೊಂದರೆಯಾಗದAತೆ ಕ್ರಮ ಕೈಗೊಳ್ಳಲಾಗುವುದು. ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಕಾಮಗಾರಿಗಳ ಸಂದರ್ಭದಲ್ಲಿ ಕೆಲವೆಡೆ ಕುಡಿಯುವ ನೀರಿನ ಪೈಪ್‌ಗಳು ಕಡಿತಗೊಂಡಿರುವುದು ಗಮನಕ್ಕೆ ಬಂದಿದ್ದು, ಅಂತಹ ಸ್ಥಳಗಳಲ್ಲಿ ತಕ್ಷಣ ದುರಸ್ತಿ ಕಾರ್ಯ ಕೈಗೊಂಡು ನೀರು ಪೂರೈಕೆಗೆ ಅಡಚಣೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಭಟನಾಕಾರರು, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳು ನಡೆಯುತ್ತಿದ್ದರೂ, ನಗರ ಪ್ರದೇಶದ ಕೂಲಿ ಕಾರ್ಮಿಕರಿಗೆ ಅಂತಹ ಉದ್ಯೋಗದ ಅವಕಾಶಗಳು ದೊರೆಯುತ್ತಿಲ್ಲ. ಬರಗಾಲದಿಂದ ಗ್ರಾಮೀಣ ಮಾತ್ರವಲ್ಲದೆ ಪಟ್ಟಣ ಪ್ರದೇಶದ ಬಡ ಕಾರ್ಮಿಕ ಕುಟುಂಬಗಳೂ ಸಂಕಷ್ಟದಲ್ಲಿವೆ. ಹೀಗಾಗಿ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ನಗರ ಪ್ರದೇಶಗಳಿಗೂ ವಿಸ್ತರಿಸಿ, ಸ್ಥಳೀಯ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಇದಾದ ಬಳಿಕ ತಾಲೂಕು ಪಂಚಾಯಿತಿ ಸಹಾಯಕ ಸಿಬ್ಬಂದಿಗೆ ಬೇಡಿಕೆಗಳ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಮರ್ಪಕವಾಗಿ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಬರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಂಡು ಗ್ರಾಮೀಣ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ನೀರು ಹಾಗೂ ಮೇವಿನ ವ್ಯವಸ್ಥೆ ಕಲ್ಪಿಸಬೇಕು, ೫೦ಸಾವಿರ ರೂಪಾಯಿ ಬರಪರಿಹಾರ ನೀಡಭೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಿಸಾನ್ ಸಭಾ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ಸಿಪಿಐ ತಾಲೂಕು ಕಾರ್ಯದರ್ಶಿ ಅಶ್ಫಾಕ್ ಮುಲ್ಲಾ, ಕಿಸಾನ್ ಸಭಾ ತಾಲೂಕು ಗೌರವಾಧ್ಯಕ್ಷ ಚಂದ್ರಕಾAತ ಖೋಬರೆ, ತಾಲೂಕು ಅಧ್ಯಕ್ಷ ಧರ್ಮಣ್ಣ ಪೂಜಾರಿ, ತಡೋಳಾ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾರಿ ಜೋಗೆ, ಕಮಲೇಶ್ ಔಟೆ, ರಮೇಶ ಹತ್ತಿಗಾಳೆ ಅವರು ಮಾತನಾಡಿ ಬೇಡಿಕೆಗೆ ಆಗ್ರಹಿಸಿದರು.
ಮುಖಂಡ ಮಹಾದೇವ ಪೂಜಾರಿ, ಕಾನೂನು ಸಲಹೆಗಾರ ಪಂಡಿತ ತಳಗರೆ, ತುಕಾರಾಂ ನಖಾತೆ, ಗೋಪಾಲ ಕುಂಬಾರ, ದತ್ತಾತ್ರೇಯ ಕಬಾಡಿ, ಇಕ್ರಮೋದ್ದೀನ್ ಗೋಳಾÀ, ರತನ್ ಕಲÀಶೆಟ್ಟಿ, ವೆಂಕಟ ಪೂಜಾರಿ, ತುಕಾರಾಮ ಶಿಂಧೆ, ಕಬೀರ ಆಫಾ, ಫಕ್ರೋದ್ದೀನ್ ಗೋಳಾ, ತ್ರೀಮುಖ ಸಿಂಧೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೇಡಿಕೆಗೆ ಒತ್ತಾಯಿಸಿದರು.

Leave A Reply

Your email address will not be published.