ಕಲಬುರಗಿ: ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ `ಅಮ್ಮ ಪ್ರಶಸ್ತಿ’ ಪ್ರಖ್ಯಾತಿಯನ್ನು ಪಡೆದಿದ್ದು, ಇದೀಗ ೨೬ ನೇ ವರ್ಷದ ಸಂಭ್ರಮದಲ್ಲಿದೆ. ಪತ್ರಕರ್ತ ಹಾಗೂ ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ತಾಯಿಯ ಸ್ಮರಣಾರ್ಥವಾಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ೨೬ ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ ೨೦೨೫ ಮತ್ತು ೨೦೨೬ ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಳೆದ ೨೫ ವರ್ಷಗಳಿಂದ ನಿರಂತರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬoಧಪಟ್ಟoತೆ ನೀಡಲಾಗುತ್ತಿರುವ ಈಗ ಅಮ್ಮ ಪ್ರಶಸ್ತಿಗೆ ೨೬ ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಕಾವ್ಯ, ಕಥೆ, ನಾಟಕ, ಕಾದಂಬರಿ ಹಾಗೂ ಲೇಖನಗಳ ಸಂಕಲನ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದು. ಆಯ್ಕೆಯಾದ ೫ ಕೃತಿಗಳಿಗೆ ತಲಾ ೫ ಸಾವಿರ ನಗದು ಪುರಸ್ಕಾರ, ಗೌರವದ ಕಾಣಿಕೆ ಹಾಗೂ ತೊಗರಿ ಧಾನ್ಯದೊಂದಿಗೆ ಸತ್ಕರಿಸಲಾಗುವುದು. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ ೩೦ ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ “ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಪಿಡಬ್ಲೂö್ಯಡಿ ಕಚೇರಿ ಹತ್ತಿರ, ಸೇಡಂ-೫೮೫ ೨೨೨. ಕಲಬುರಗಿ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: ೯೭೩೧೬೬೬೦೫೨ ಸಂಪರ್ಕಿಸಬಹುದು.