Shubhashaya News

ಆಳಂದದ ಅಂಬೇಡ್ಕರ್ ವಸತಿ ನಿಲಯದಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಹೊಟ್ಟೆನೋವು, ವಾಂತಿಯಿಂದ ವಿದ್ಯಾರ್ಥಿಗಳಿಗೆ ತೊಂದರೆ; ಆಸ್ಪತ್ರೆಗೆ ದಾಖಲು

ಕಲಬುರಗಿ: ಆಳಂದ ಪಟ್ಟಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಊಟ ಸೇವಿಸಿದ ಬಳಿಕ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿಗಳು ರೊಟ್ಟಿ, ಅನ್ನ ಹಾಗೂ ಸಾಂಬರ್ ಸೇವಿಸಿದ ಬಳಿಕ ಹೊಟ್ಟೆನೋವು ಸೇರಿದಂತೆ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ತಿಳಿದುಬಂದಿದೆ. ಆಹಾರ ಸೇವನೆಯಿಂದಲೇ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ಆಹಾರ ವಿಷಬಾಧೆ (ಫುಡ್ ಪಾಯಿಸನಿಂಗ್) ಶಂಕೆ ವ್ಯಕ್ತವಾಗಿದೆ.
ವಸತಿ ನಿಲಯಕ್ಕೆ ಕಳಪೆ ಗುಣಮಟ್ಟದ ಆಹಾರ ಸಾಮಗ್ರಿ ಸರಬರಾಜಾಗಿರುವುದರಿಂದಲೇ ಘಟನೆ ಸಂಭವಿಸಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ.

ಘಟನೆ ತಿಳಿದು ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿ ವಿಜಯಲಕ್ಷ್ಮಿ ಹೋಳ್ಕರ್, ವಾರ್ಡನ್ ಸೇರಿದಂತೆ ಇತರೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ವಸತಿ ನಿಲಯದ ಆಹಾರ ವ್ಯವಸ್ಥೆ ಹಾಗೂ ಅಡುಗೆ ಸಾಮಗ್ರಿಗಳನ್ನು ಪರಿಶೀಲಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗೆ ತೆರಳಿ ವಿದ್ಯಾರ್ಥಿಗಳ ಆರೋಗ್ಯದ ಕುರಿತು ಮಾಹಿತಿ ಪಡೆದು, ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply

Your email address will not be published.