Shubhashaya News

ಲಘು ವಿಮಾನ ತುರ್ತು ಭೂಸ್ಪರ್ಶ

ಕಲಬುರಗಿ: ನಗರದ ಸೇಡಂ ರಸ್ತೆಯಲ್ಲಿರುವ ವಿಮಾನ ನಿಲ್ದಾಣದ ಸಮೀಪ ತರಬೇತಿ ಲಘು ವಿಮಾನವೊಂದು ತಾಂತ್ರಿಕ ದೋಷದ ಕಾರಣದಿಂದ ತೊಗರಿ ಜಮೀನಿನಲ್ಲಿ ತುರ್ತು ಭೂಸ್ಪರ್ಶ ವಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ವಿಮಾನ ನಿಲ್ದಾಣದ ಸಮೀಪ ಇರುವ ಸೇಡಂ ರಸ್ತೆಯ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಭೂಸ್ಪರ್ಶ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಮಾನದಲ್ಲಿದ್ದ ಇಬ್ಬರು ಪೈಲೆಟ್ ಗಳು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ವಿಮಾನದಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಪೈಲೆಟ್ ಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ತೊಗರಿ ಬಿತ್ತನೆ ಮಾಡಿದ ಹೊಲದಲ್ಲೇ ಸುರಕ್ಷಿತವಾಗಿ ಇಳಿಸಿದ್ದಾರೆ.

ಮಾಡಬೂಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸ್ಥಳೀಯರು ಧಾವಿಸಿದ್ದಾರೆ.

Leave A Reply

Your email address will not be published.