ಕಲಬುರಗಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ದೇಶದ ವಿವಿಧ ಬ್ಯಾಂಕಿಂಗ್, ಎಸ್.ಎಸ್.ಸಿ., ಹಾಗೂ ಆರ್.ಆರ್.ಬಿ. ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ಕಾಲ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು 2026ರ ಅಕ್ಟೋಬರ್ 31 ರೊಳಗಾಗಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಸಂಪರ್ಕಿಸಬೇಕೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.