ಚಿತ್ತಾಪುರ: 2,00,192 ಮತದಾರರ ಹೆಸರು ಹೊಂದಿದ ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್ಐ-ಆರ್-2026ರ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ತಿಳಿಸಿದ್ದಾರೆ.
ಅಂತಿಮ ಪಟ್ಟಿಯಲ್ಲಿ 1,00,958 ಪುರುಷ, 99,221 ಮಹಿಳಾ ಹಾಗೂ 15 ಇತರೆ ಮತದಾರರ ಹೆಸರುಗಳಿವೆ. ಪಟ್ಟಿಯನ್ನು ಎಲ್ಲಾ ಮತಗಟ್ಟೆ ಕೇಂದ್ರಗಳು ಹಾಗೂ ತಹಶೀಲ್ದಾರ್ ಕಚೇರಿಯಲ್ಲಿ ಪ್ರಚುರಪಡಿಸಲಾಗಿದೆ. ಚುನಾವಣಾ ಆಯೋಗದ ವೆಬ್ಸೈಟ್ನಲ್ಲೂ ಲಭ್ಯವಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಚುನಾವಣಾ ಆಯೋಗ ನಡೆಸಿದ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆಯಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಮೊದಲಿದ್ದ 2,51,226 ಮತದಾರರ ಪೈಕಿ 51,034 ಮತದಾರರ ಹೆಸರುಗಳು ಪಟ್ಟಿಯಿಂದ ಡಿಲಿಟ್ ಆಗಿರುವುದು ಕಂಡುಬಂದಿದೆ.