Shubhashaya News

ನ. 4ರಂದು ನಾನೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಬಗ್ಗೆ ಘೋಷಣೆ ಮಾಡುತ್ತೇನೆ : ಭೈರತಿ ಸುರೇಶ್ ಹೇಳಿಕೆ!

ಬೆಂಗಳೂರು: ನವೆಂಬರ್ ತಿಂಗಳ ಮೊದಲ ವಾರದಲ್ಲಿ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಗುರುವಾರ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ವಿಚಾರದ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ ಐದು ಬಾರಿ ಡೀಸೆಲ್ ಮತ್ತು ಇತರ ತೈಲೋತ್ಪನ್ನಗಳ ದರವನ್ನು ಹೆಚ್ಚಳ ಮಾಡಿದೆ. ಇದರಿಂದ ಸರ್ಕಾರದ ನಾಲ್ಕೂ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಆರ್ಥಿಕ ಹೊರೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿ ರಾಜ್ಯದ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ನಾವು ಬಸ್ ಪ್ರಯಾಣದ ದರ ಹೆಚ್ಚಳ ಮಾಡಬೇಕೆಂದು ತೀರ್ಮಾನ ಮಾಡಿದ್ದೇವೆ. ಅದರಂತೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಬಗ್ಗೆ ಎಲ್ಲಾ ಸಚಿವರ ಜೊತೆ ಚರ್ಚೆ ನಡೆಸಿದರು ಎಂದು ಸುರೇಶ್ ಹೇಳಿದರು.

ದರ ಏರಿಕೆ ಇಲಾಖೆಗೆ ಹೊಣೆ

ಎಲ್ಲಾ ಸಚಿವರ ಅಭಿಪ್ರಾಯ ಪಡೆದ ನಂತರ ಮುಖ್ಯಮಂತ್ರಿಗಳು ಪ್ರಯಾಣ ದರ ಏರಿಕೆ ಮಾಡುವ ನಿರ್ಧಾರವನ್ನು ನಮ್ಮ ಸಾರಿಗೆ ಇಲಾಖೆಗೇ ವಹಿಸಿದ್ದಾರೆ ಎಂದು ಅವರು ತಿಳಿಸಿದರು. ಮುಖ್ಯಮಂತ್ರಿಗಳು ನೀಡಿರುವ ಜವಾಬ್ದಾರಿ ಹಿನ್ನೆಲೆಯಲ್ಲಿ ನವೆಂಬರ್ 3 ರಂದು ಎಲ್ಲಾ ನಾಲ್ಕೂ ಸಾರಿಗೆ ನಿಗಮಗಳ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ನವೆಂಬರ್ 4 ರಂದು ಈ ಬಗ್ಗೆ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

Leave A Reply

Your email address will not be published.