ನಗರ ಪ್ರದೇಶದ ವಿದ್ಯಾರ್ಥಿಗಳಿಗೆ, ಗ್ರಾಮೀಣ ಬದುಕಿನ ನೈಜ ಪರಿಚಯ ಮಾಡಿಸಲು ‘ಗ್ರಾಮಾನುಭವ’ ಯೋಜನೆ ಜಾರಿ : ಸಿಎಂ ಡಿಕೆಶಿ .
ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ನೈಜ ಪರಿಚಯ ಮಾಡಿಸಲು ‘ಗ್ರಾಮಾನುಭವ’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಈ ಯೋಜನೆಯಡಿ ಒಟ್ಟು ೨೦,೫೦೦ ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ಎರಡರಿಂದ ಮೂರು ದಿನಗಳ ಕಾಲ ಗ್ರಾಮ ವಾಸ್ತವ್ಯ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಪ್ರಥಮ ಹಂತದ ಬಳಿಕ, ಎರಡನೇ ಹಂತದಲ್ಲಿ ಸರ್ಕಾರಿ ಶಾಲೆಯ ಸುಮಾರು ೨,೫೦೦ ವಿದ್ಯಾರ್ಥಿಗಳಿಗೂ ಸಹ ಈ ಗ್ರಾಮ ವಾಸ್ತವ್ಯ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಗ್ರಾಮೀಣ ಜೀವನೋಪಾಯದ ವಿಧಾನಗಳನ್ನು ನೇರವಾಗಿ ಪರಿಚಯಿಸುವುದು ಮತ್ತು ರೈತರು ಹಾಗೂ ಶ್ರಮಿಕರ ದುಡಿಮೆಯ ನೈಜ ಮೌಲ್ಯವನ್ನು ತಿಳಿಸಿಕೊಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಗ್ರಾಮೀಣ ಸಂಸ್ಕೃತಿ ಮತ್ತು ಪರಿಸರದ ಬಗ್ಗೆ ಯುವ ಪೀಳಿಗೆಯಲ್ಲಿ ಅರಿವು ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸ್ಗಳು ಸೇರಿದಂತೆ ಸಮಗ್ರ ವೃತ್ತಿಪರ ಹಾಗೂ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.