Shubhashaya News

ಜೀವನಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರರಿಂದ ಧ್ವಜಾರೋಹಣ

ಆಳಂದ: ಪಟ್ಟಣದ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ ಅವರು ಧ್ವಜಾರೋಹಣ ನೆರವೇರಿಸಿ ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ಸಾರಿದರು.

ಕನ್ನಡ ಭಾಷೆ ನಮ್ಮ ನಾಡಿನ ಅಸ್ಮಿತೆ ಹಾಗೂ ಸ್ವಾಭಿಮಾನದ ಸಂಕೇತವಾಗಿದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ. ವಿಶೇಷವಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ, ಗೌರವ ಮತ್ತು ಪ್ರೀತಿಯನ್ನು ಬೆಳೆಸಬೇಕು. ಕನ್ನಡದ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಕೆಜಿ ಪದವಿ ಕಾಲೇಜಿನ ಪ್ರಾಚಾರ್ಯೆ ಕಲ್ಯಾಣಿ ಸಾವಳಗಿ, ಪಿಯು ಕಾಲೇಜಿನ ಪ್ರಾಚಾರ್ಯ ಡಾ. ಅಪ್ಪಾಸಾಬ ಬಿರಾದಾರ, ಬಿ.ಎಡ್. ಕಾಲೇಜಿನ ಪ್ರಾಚಾರ್ಯ ಡಾ. ಅಶೋಕರೆಡ್ಡಿ ಹಾಗೂ ಎಸ್‌ಆರ್‌ಜಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯೆ ಜ್ಯೋತಿ ವಿಶಾಖ್ ಸೇರಿದಂತೆ ಸಂಸ್ಥೆಯ ವಿವಿಧ ಶಿಕ್ಷಣ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು-ನುಡಿಯ ಮಹತ್ವವನ್ನು ಸ್ಮರಿಸಿ, ಕನ್ನಡದ ಗೌರವ ಮತ್ತು ಹಿರಿಮೆಯನ್ನು ಎತ್ತಿಹಿಡಿಯುವ ಸಂಕಲ್ಪ ಕೈಗೊಳ್ಳಲಾಯಿತು.

Leave A Reply

Your email address will not be published.