ಕಲಬುರಗಿ: ಪ್ರತಿ ಲೀಟರ್ ಹಾಲಿಗೆ ಹೆಚ್ಚಿಸಿರುವ 8 ರು. ದರವನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಕಾರ್ಯದರ್ಶಿ ಸುಂದರ ಡಿ ಸಾಗರ ಅವರು ಸರಕಾರಕ್ಕೆ ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ ಕನಿಷ್ಠ ವಿದ್ಯಾಭ್ಯಾಸವಿಲ್ಲದವರಿಗೂ ಉದ್ಯೋಗಾವಕಾಶ ಕಲ್ಪಿಸುವ ಹೋಟೆಲ್ ಉದ್ಯಮದ ಮೇಲೆ ಪದೇ ಪದೇ ಬೆಲೆ ಏರಿಕೆಯ ಹೊರೆ ಹೇರುವುದು ಸರಿಯಲ್ಲ? ದೇಶದ ಆರ್ಥಿಕ ಬೆಳವಣಿಗೆ, ನಿರುದ್ಯೋಗ ನಿವಾರಣೆ ಹಾಗೂ ರೈತರ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಹೋಟೆಲ್ ಉದ್ಯಮ ಇಂದು ಹಲವು ಸವಾಲು ಎದುರಿಸುತ್ತಿದೆ ಎಂದರು.
ಯುದ್ಧದ ಪರಿಣಾಮವಾಗಿ ಅಡುಗೆ ಅನಿಲದ ಬೆಲೆ ಹೆಚ್ಚಳ,ಸಕ್ಕರೆ,ಬೆಲ್ಲ,ಅಕ್ಕಿ,ಈರುಳ್ಳಿ ಹಾಗೂ ತರಕಾರಿಗಳ ಬೆಲೆ ಏರಿಕೆಯಿಂದಾಗಿ ಈಗಾಗಲೇ ಹೋಟೆಲ್ ಉದ್ಯಮ ಸಂಕಷ್ಟದಲ್ಲಿದೆ.ನುರಿತ ಕೆಲಸಗಾರರ ಕೊರತೆ, ಕಾರ್ಮಿಕರ ವೇತನ ಹೆಚ್ಚಳ, ವಿದ್ಯುತ್ ಮತ್ತು ನೀರಿನ ದರ ಹಾಗೂ ನಗರ ಪಾಲಿಕೆ ತೆರಿಗೆಗಳ ಹೆಚ್ಚಳದಿಂದ ಉದ್ಯಮ ನಡೆಸುವುದೇ ಕಷ್ಟವಾಗಿದೆ ಎಂದು ಅವರು ಅಳಲು ತೋಡಿಕೊಂಡರು.ಈ ವೇಳೆ ಕಳೆದ ಮೂರು ವರ್ಷಗಳಲ್ಲಿ ಹಾಲಿನ ದರ ಸುಮಾರು 17 ರೂ. ಹೆಚ್ಚಳ ವಾಗಿದ್ದು, ಇದೀಗಮತ್ತೆ ಪ್ರತಿ ಲೀಟರ್ಗೆ ರೂ.ಏರಿಸಿರುವುದು ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ.ಹಾಲಿನ ದರ ಏರಿಕೆಯಾದರೆ ಮೊಸರು, ತುಪ್ಪ,ಪನ್ನೀರ ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆಯೂ ಹೆಚ್ಚಳವಾಗುತ್ತದೆ. ಇದರ ಅಂತಿಮ ಹೊರೆ ಸಾಮಾನ್ಯ ಗ್ರಾಹಕರ ಮೇಲೆಯೇ ಬೀಳುತ್ತದೆ.ರೈತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಕರ್ತವ್ಯ ಬರಗಾಲದಿಂದ ಬೆಳೆ ನಷ್ಟ ಅನುಭವಿಸುವ ರೈತರಿಗೆ ಪರಿಹಾರ ನೀಡುವುದು ಹಾಗೂ ಕಬ್ಬಿಗೆ ಸೂಕ್ತ ಬೆಲೆ ಕಲ್ಪಿಸಿ ಕೊಡುವುದು ಅತ್ಯಗತ್ಯ ಅನುಕೂಲ ಮಾಡಿಕೊಡುವ ಹೆಸರಿನಲ್ಲಿ ಹಾಲಿನ ದರವನ್ನು ಏಕಾಏಕಿ ಹೆಚ್ಚಿಸುವ ಬದಲು ಸರ್ಕಾರವೇ ನೇರವಾಗಿ ಸಬ್ಸಿಡಿ ಅಥವಾ ಆರ್ಥಿಕ ನೆರವು ನೀಡುವ ಮೂಲಕ ರೈತರನ್ನು ಬೆಂಬಲಿಸಬೇಕು.ಆದ್ದರಿಂದ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಪ್ರತಿ ಲೀಟರ್ ಗೆ ಹೆಚ್ಚಿ ಸಿರುವ 8 ರೂ. ಹಾಲಿನ ದರ ಏರಿಕೆಯನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರೈತರಿಗೂ ನ್ಯಾಯ ಸಿಗಬೇಕು, ಹೋಟೆಲ್ ಉದ್ಯಮವೂ ಉಳಿಯಬೇಕು.ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ ತಟ್ಟಬಾರದು.ಈ ವಿಷಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Prev Post