Shubhashaya News

ಡೋಣಗಾಂವ ಗ್ರಾಮಕ್ಕೆ ಸಂಸದ ಉಮೇಶ್ ಜಾಧವ ಧೀಡಿರ್ ಭೇಟಿ

ಡೋಣಗಾಂವ ಗ್ರಾಮ ಮಾದರಿ ಗ್ರಾಮವನ್ನಾಗಿ ಮಾಡಲು ಅಧಿಕಾರಿಗಳಿಗೆ ಸೂಚನೆ

ಚಿತ್ತಾಪುರ: ತಾಲೂಕಿನ ಡೋಣಗಾಂವ ಗ್ರಾಮಕ್ಕೆ ಸಂಸದ ಡಾ. ಉಮೇಶ ಜಾಧವ ಅಧಿಕಾರಿಗಳೊಂದಿಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿತ್ತಾಪುರ: ತಾಲೂಕಿನ ಡೋಣಗಾಂವ ಗ್ರಾಮಕ್ಕೆ ಸಂಸದ ಡಾ. ಉಮೇಶ ಜಾಧವ ಅಧಿಕಾರಿಗಳೊಂದಿಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಸದರು ಗ್ರಾಮಕ್ಕೆ ಭೇಟಿ ನೀಡಿದ ಕೂಡಲೇ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಗ್ರಾಮದಲ್ಲಿ ಅನೇಕ ಸಮಸ್ಯೆಗಳಿವೆ ನಮ್ಮ ಸಮಸ್ಯೆಗಳಿಗೆ ಸ್ಪಂಧಿಸಲು ಯಾರು ಬರಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಬರ್ತಾರೆ ನಂತರ ಇತ್ತ ಕಡೆ ಯಾರೋಬ್ಬರು ಸುಳಿಯಲ್ಲ ಎಂದು ಆರೋಪಿಸಿದರು.
ಗ್ರಾಮ ಮೂಲ ಸೌಲಭ್ಯದಿಂದ ವಂಚಿತವಾಗಿದೆ. ಗ್ರಾಮದಲ್ಲಿ ಜನಸಂಖ್ಯೆ ಹೆಚ್ಚಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರು ವೈದ್ಯಾಧಿಕಾರಿಗಳು ಗ್ರಾಮಕ್ಕೆ ಬಂದು ಭೇಟಿ ನೀಡಲ್ಲ. ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ ಇಲ್ಲ. ಸಾರ್ವಜನಿಕ ಆಸ್ಪತ್ರೆ, ಪಶು ಸಂಗೋಪನಾ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದೇ ಯಾವುದೇ ರೀತಿಯ ಸೌಲಭ್ಯಗಳಿಲ್ಲ. ಹೀಗಾಗಿ ಡೋಣಗಾಂವ ಗ್ರಾಮ ಸಂಪೂರ್ಣ ಹಿಂದುಳಿದ ಗ್ರಾಮ ಎನಿಸಿಕೊಂಡಿದೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ಸಂಸದರ ಮುಂದೇ ತೋಡಿಕೊಂಡರು.
ಗ್ರಾಪಂ ಕಚೇರಿಯ ಬಾಗಿಲು ತೆಗೆಯುವವರಿಲ್ಲದೇ ಯಾವಾಗ ನೋಡಿದರು ಬಂದ್ ಆಗಿರುತ್ತದೆ. ಗ್ರಾಮದ ಗ್ರಾಮ ಪಂಚಾಯಿತಿಯ ಪಿಡಿಒ ಅವರು ಗ್ರಾಮಕ್ಕೆ ಬರಲ್ಲ. ಗ್ರಾಮದಲ್ಲಿ ಸ್ಯಾನೀಟೈಜರ್ ಸಿಂಪರಣೆ ಮಾಡಿಲ್ಲ. ಹೀಗಾಗಿ ನಮ್ಮ ಸಮಸ್ಯೆ ಯಾರಿಗೆ ಹೇಳಬೇಕು ಎನ್ನುವುದು ಒಂದು ತಿಳಿಯುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ನಂತರ ಸಂಸದ ಡಾ. ಉಮೇಶ ಜಾಧವ ಮಾತನಾಡಿ, ಡೋಣಗಾಂವ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲಾಗುವುದು. ಎಂಪಿ ಫಂಡ್‍ನಿಂದ 10 ಲಕ್ಷ ರೂ. ನೀಡಲಾಗುವುದು. ಗ್ರಾಮದಲ್ಲಿನ ಪ್ರತಿಯೊಂದು ಸಮಸ್ಯೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನಿಡಿದರು.
ಡೋಣಗಾಂವ ಗ್ರಾಮಕ್ಕೆ ಅಂಟಿಕೊಂಡಿರುವ ಕೆರೆಯನ್ನು ಸಂಪೂರ್ಣ ಜಿರ್ಣೋದ್ಧಾರ ಮಾಡಿ ಮೀನು ಸಾಕಾಣಿಕೆಗೆ ಅನುಕೂಲ ಮಾಡಬೇಕು. ಗ್ರಾಮದಲ್ಲಿರುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಗ್ರಾಮದ ಅಂಗನವಾಡಿ ಕೇಂದ್ರ, ಪ್ರೌಢ ಶಾಲೆ, ಗ್ರಾಮ ಪಂಚಾಯಿತಿ, ಹದಗೆಟ್ಟ ರಸ್ತೆಗಳು, ಪಶು ಸಂಗೋಪನೆ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರೀಶಿಲನೆ ನಡೆಸಿದರು.
ಅಪರ್ ಜಿಲ್ಲಾಧಿಕಾರಿ ಶಂಕ್ರಣ್ಣ ವಣಿಕ್ಯಾಳ, ಜಿಪಂ ಸಿಒ ದೀಲೀಶ್ ಶಾಸಿ, ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ, ಜಿಪಂ ಮಾಜಿ ಸದಸ್ಯ ಅರವಿಂದ ಚವ್ಹಾಣ, ಬಿಜೆಪಿ ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್ ಮುಖಂಡರಾದ ಅಶ್ವಥ ರಾಠೋಡ, ಭೀಮಣ್ಣ ಸೀಬಾ, ಮಹೀಪಾಲ್ ಸೇರಿದಂತೆ ಡೋಣಗಾಂವ ಗ್ರಾಮಸ್ಥರು ಇದ್ದರು,

Leave A Reply

Your email address will not be published.