Shubhashaya News

ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲು

ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಬೆಂಗಳೂರಿನಲ್ಲಿ ಇದೀಗ ದೂರ ದಾಖಲಾಗಿದೆ ಸಾಮಾಜಿಕ ಕಾರ್ಯಕರ್ತರು ಒಬ್ಬರು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಗೆ ಪ್ರಿಯಾಂಕ ಖರ್ಗೆ ವಿರುದ್ಧ ದೂರು ನೀಡಿದ್ದಾರೆ. ಕೋಮು ಭಾವನೆಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ ಎಂದು ಉಲ್ಲೇಖ ಮಾಡಿ ದೂರು ನೀಡಿದ್ದಾರೆ. ಎಕ್ಸ್ ಖಾತೆಯಲ್ಲಿ ಸುಳ್ಳು ಮತ್ತು ದಾರಿ ತಪ್ಪಿಸುವ ಮಾಹಿತಿ ಹರಡಿದ್ದಾರೆ.

ಬಿಹಾರ ಮತ್ತು ಹರಿಯಾಣದಲ್ಲಿ ಜೀವಂತ  ಕಾರ್ಟ್ರಿಡ್ಜ್ ಗಳ ವಶಪಡಿಸಿಕೊಳ್ಳುವಿಕೆ RSS ಅನ್ನು ಸಂಪರ್ಕಿಸಿ ಎಂದು ಎಕ್ಸ್ ಖಾತೆಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಈ ಹೇಳಿಕೆಗಳು ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಸಾರ್ವಜನಿಕ ಕಿಡಿಗೇಡಿತನವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. BNS 2023ರ ಸೆಕ್ಷನ್ಗಳ ಅಡಿಯಲ್ಲಿ FIR ದಾಖಲಿಸಿ ಸಚಿವರ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ

 

Leave A Reply

Your email address will not be published.