Shubhashaya News

ರಾಜ್ಯದ ವಿವಿಧ ನಿಗಮ-ಮಂಡಳಿ, ಪ್ರಾಧಿಕಾರಗಳಿಗೆ 428 ಮಂದಿಯನ್ನು ನೂತನ ನಿರ್ದೇಶಕರು ಮತ್ತು ಸದಸ್ಯರ ನೇಮಿಸಿ ಸರ್ಕಾರ ಆದೇಶ

ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳ ಆಡಳಿತಾತ್ಮಕ ಕಾರ್ಯಚಟುವಟಿಕೆಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ 428 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರುಗಳನ್ನು ನೇಮಕ ಮಾಡಿ ಸರ್ಕಾರ ತುರ್ತು ಆದೇಶ ಹೊರಡಿಸಿದೆ.

finaL

​ಮುಖ್ಯಮಂತ್ರಿಗಳ ಟಿಪ್ಪಣಿ ಸಂಖ್ಯೆ: ASCM/T/3428/2026ರ ಅನುಮೋದನೆಯಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಸಿಆಸುಇ) ಸರ್ಕಾರದ ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಅಧಿಕೃತ ಟಿಪ್ಪಣಿ ಮೂಲಕ ಈ ಸಂಬಂಧ ತಕ್ಷಣವೇ ಅಗತ್ಯ ಕ್ರಮ ವಹಿಸಿ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.

​ಮುಖ್ಯಮಂತ್ರಿಗಳ ಅನುಮೋದಿತ ಪಟ್ಟಿಯ ಅನ್ವಯ, ರಾಜ್ಯಾದ್ಯಂತ ಹಲವು ಪ್ರಮುಖ ನಿಗಮ-ಮಂಡಳಿಗಳಿಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಪಟ್ಟಿಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್), ಬೆಸ್ಕಾಂ, ಹೆಸ್ಕಾಂ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ, ಕರ್ನಾಟಕ ಗೃಹ ಮಂಡಳಿ, ಕೆಪಿಟಿಸಿಎಲ್, ಕೆಯೋನಿಕ್ಸ್, ಕೆಎಸ್‌ಆರ್‌ಟಿಸಿ, ವಾಲ್ಮೀಕಿ ಅಭಿವೃದ್ಧಿ ನಿಗಮ, ವಕ್ಫ್ ಮತ್ತು ವಿವಿಧ ಸಮುದಾಯ ಅಭಿವೃದ್ಧಿ ನಿಗಮಗಳು ಸೇರಿದಂತೆ 400ಕ್ಕೂ ಹೆಚ್ಚು ಸ್ಥಾನಗಳಿಗೆ ನೇಮಕಾತಿ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

​ಆಡಳಿತ ಸುಧಾರಣೆ ಹಾಗೂ ನಿಗಮ-ಮಂಡಳಿಗಳ ಕಾರ್ಯನಿರ್ವಹಣೆಗೆ ವೇಗ ನೀಡುವ ಉದ್ದೇಶದಿಂದ ಈ ನೇಮಕಾತಿ ನಡೆದಿದ್ದು, ಸಂಬಂಧಪಟ್ಟ ಎಲ್ಲಾ ಇಲಾಖೆಗಳು ತಮ್ಮ ಅಧೀನದ ನಿಗಮ-ಪ್ರಾಧಿಕಾರಗಳಿಗೆ ಅಧಿಕೃತವಾಗಿ ನೇಮಕಾತಿ ಆದೇಶಗಳನ್ನು ಹೊರಡಿಸುವ ಪ್ರಕ್ರಿಯೆಯನ್ನು ಆರಂಭಿಸಿವೆ.

 

 

Leave A Reply

Your email address will not be published.