ಆಳಂದ ತಾಲೂಕಿನ ತಡಕಲ ಗ್ರಾಮದಲ್ಲಿ ಯುವ ಮುಖಂಡ ಮಹಾಂತೇಶ ಕಲಶೆಟ್ಟಿ ನೇತೃತ್ವದಲ್ಲಿ ಗ್ರಾಮಸ್ಥರಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ವಿತರಿಸಲಾಯಿತು.
ಇತ್ತೀಚಿಗೆ ಗ್ರಾಮದಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಜಿ.ಪಂ ಮಾಜಿ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಗ್ರಾಮಸ್ಥರಿಗೆ ಮಾಸ್ಕ್, ಸ್ಯಾನಿಟೈಜರ್ ವಿತರಣೆ ಮಾಡಿ ಮಾತನಾಡಿದರು.
ನವಕಲ್ಯಾಣ ಕರ್ನಾಟಕ ವಿಜಯೇಂದ್ರ ಯಡಿಯೂರಪ್ಪ ಅಭಿಮಾನಿ ಸಂಘದ ವತಿಯಿಂದ ಆಳಂದ ಶಾಸಕರಾದ ಸುಭಾಷ್ ಆರ್ ಗುತ್ತೇದಾರ ಅವರ 70ನೇ ಜನ್ಮ ದಿನದ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ ಮಾಜಿ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಅವರು, ಸಂಘವು ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಸಂದರ್ಭೋಚಿತವಾಗಿದೆ ಕೋರೋನಾ ವಿರುದ್ಧದ ಸಮರದಲ್ಲಿ ಈ ಎರಡು ಅಂಶಗಳು ಮುಖ್ಯವಾದ ಪಾತ್ರ ವಹಿಸುತ್ತಿವೆ ಹೀಗಾಗಿ ಇವುಗಳ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.

ಈ ಸಂದರ್ಭದಲ್ಲಿ ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ಶರಣು ಕುಮಸಿ,ನವಕಲ್ಯಾಣ ಕರ್ನಾಟಕ ವಿಜಯೇಂದ್ರ ಯಡಿಯೂರಪ್ಪ ಅಭಿಮಾನಿ ಸಂಘದ ಅಧ್ಯಕ್ಷ ಮಹಾಂತೇಶ ಕಲಶೆಟ್ಟಿ ಸೇರಿದಂತೆ ಇತರರು ಹಾಜರಿದ್ದರು.