ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಆಳಂದ ಬಿಜೆಪಿ ಯುವ ಮುಖಂಡ ಹರ್ಷಾ ಗುತ್ತೇದಾರ ಭೇಟಿಯಾಗಿ ಚರ್ಚಿಸಿದರು.
ಆಳಂದ ರೈತರ ಬೆಳೆ ವಿಮೆ, ಬರ ಪರಿಹಾರ ಹಾಗೂ ಕೈಗಾರಿಕೆ ಸ್ಥಾಪನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರೊಂದಿಗೆ ಬಿಜೆಪಿ ಯುವ ಮುಖಂಡರಾದ ಹರ್ಷಾ ಗುತ್ತೇದಾರ್ ಚರ್ಚೆ ನಡೆಸಿದರು.
ಶನಿವಾರ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಬೆಂಗಳೂರಿನ ಜೆ.ಪಿ. ನಗರದ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕ ಹಾಗೂ ಆಳಂದ ತಾಲ್ಲೂಕಿನ ಮುಖಂಡ ಹರ್ಷಾ ಎಸ್. ಗುತ್ತೇದಾರ್ ಅವರು, ಆಳಂದ ತಾಲ್ಲೂಕಿನ ರೈತರು ಮತ್ತು ಯುವಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಿದರು.
ಆಳಂದ ತಾಲ್ಲೂಕಿನ ರೈತರಿಗೆ ಬರಬೇಕಿರುವ ಬೆಳೆ ವಿಮೆ ಹಣವನ್ನು ಆದಷ್ಟು ಬೇಗ ಜಮೆ ಮಾಡುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ತಾಲ್ಲೂಕಿನಲ್ಲಿ ಮಳೆಯ ಕೊರತೆಯಿಂದ ಬರಗಾಲ ಬಿದ್ದಿದೆ. ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬರ ಪರಿಹಾರ ಒದಗಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಬಗ್ಗೆಯೂ ಸಚಿವರ ಗಮನ ಸೆಳೆದರು.
ಇದೇ ಸಂದರ್ಭದಲ್ಲಿ ಆಳಂದ ತಾಲ್ಲೂಕಿನ ಯುವಕರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ತಾಲ್ಲೂಕಿನಲ್ಲಿ ಹೊಸ ಕೈಗಾರಿಕೆ ಸ್ಥಾಪಿಸುವ ಕುರಿತು ಚರ್ಚಿಸಿದರು. ಕೈಗಾರಿಕೆಗಳು ಆರಂಭವಾದರೆ ಸ್ಥಳೀಯ ಯುವಕರಿಗೆ ಉದ್ಯೋಗ ದೊರೆಯುವುದರ ಜೊತೆಗೆ ತಾಲ್ಲೂಕಿನ ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಆಳಂದದ ರೈತರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವುದು, ಯುವಕರಿಗೆ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶರಣಗೌಡ ಪಾಟೀಲ ದೇವಂತಗಿ, ಶಿವಪ್ರಕಾಶ ಹೀರಾ, ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಾಗರಾಜ ಶೇಗಜಿ ಇದ್ದರು.