Shubhashaya News

ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟ: ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಲು ಸೂಚನೆ

ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದಿಂದ ಶೈಕ್ಷಣಿಕ ಯೋಜನೆಯಡಿ ಹಮ್ಮಿಕೊಳ್ಳಲಾಗುತ್ತಿರುವ ಐ.ಎ.ಎಸ್., ಕೆ.ಎ.ಎಸ್. ತರಬೇತಿ ಹಾಗೂ ಬ್ಯಾಂಕಿಂಗ್, ಆರ್.ಆರ್.ಬಿ., ಎಸ್.ಎಸ್.ಸಿ. ಮತ್ತು ಗ್ರೂಪ್-ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಸಂಬಂಧಿಸಿದಂತೆ ಎರಡನೇ ಹಂತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಸಂಘದ ತಿತಿತಿ.ಞಞhಡಿಚಿಛಿs.ಛಿom ವೆಬ್ಸೈಟ್ದಲ್ಲಿ ಈಗಾಗಲೇ ಮಾರ್ಚ್ 15 ರಂದು ಪ್ರಕಟಿಸಲಾಗಿದೆ ಎಂದು ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕøತಿಕ ಸಂಘದ ಅಧೀನ ಕಾರ್ಯದರ್ಶಿಗಳು ಅವರು ತಿಳಿಸಿದ್ದಾರೆ.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯು ಇದೇ ಮಾರ್ಚ್ 19 ರಂದು ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆಯಲಿದೆ. ಐ.ಎ.ಎಸ್./ ಕೆ.ಎ.ಎಸ್. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ಇದೇ ಮಾರ್ಚ್ 19 ರಂದು ಬೆಳಿಗ್ಗೆ 10 ಗಂಟೆಗೆ ಹಾಗೂ ಬ್ಯಾಂಕಿಂಗ್, ಆರ್.ಆರ್.ಬಿ., ಎಸ್.ಎಸ್.ಸಿ. ಮತ್ತು ಗ್ರೂಪ್-ಸಿ ಪೂರ್ವಭಾವಿ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ಅಂದು ಮಧ್ಯಾಹ್ನ 2 ಗಂಟೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಮೇಲ್ಕಂಡ ಸ್ಥಳದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.

Comments are closed.

Don`t copy text!