ಬೆಂಗಳೂರು. ಮಾ.19: ಚಿತ್ತಾಪುರದ ಮಾಜಿ ಶಾಸಕರಾದ ಶ್ರೀ ವಾಲ್ಮೀಕಿ ನಾಯಕ ಅವರ ನಿಧನಕ್ಕೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಶ್ರೀ ವಾಲ್ಮೀಕಿ ನಾಯಕ ಅವರು 1 ಬಾರಿ ಶಾಸಕರಾಗಿದ್ದರು. ಸರಳ , ಸಜ್ಜನ ರಾಜಕಾರಣಿಯಾಗಿದ್ದರು. ಅಭಿವೃದ್ಧಿ ಗೆ ಪೂರಕವಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಅಗಲಿಕೆಯಿಂದ ಆ ಪ್ರದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಿ, ಮೃತರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ.
Comments are closed.