Shubhashaya News

ಮಾಜಿ ಶಾಸಕ ವಾಲ್ಮೀಕಿ ನಾಯಕ ನಿಧನಕ್ಕೆ ಬಿಜೆಪಿ ವಿಜಯಪುರ ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್ ಕಾರಜೋಳ ಅವರಿಂದ ಸಂತಾಪ ಸೂಚನೆ

ಬೆಂಗಳೂರು. ಮಾ.19: ಚಿತ್ತಾಪುರದ ಮಾಜಿ ಶಾಸಕರಾದ  ವಾಲ್ಮೀಕಿ ನಾಯಕ ಅವರ ನಿಧನಕ್ಕೆ ಬಿಜೆಪಿ ಪಕ್ಷದ ವಿಜಯಪುರ ಜಿಲ್ಲಾ ಉಪಾಧ್ಯಕ್ಷರಾದ  ಉಮೇಶ್ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಶ ವಾಲ್ಮೀಕಿ ನಾಯಕ ಅವರು 1 ಬಾರಿ ಶಾಸಕರಾಗಿದ್ದರು. ಸರಳ , ಸಜ್ಜನ ರಾಜಕಾರಣಿಯಾಗಿದ್ದರು. ಅಭಿವೃದ್ಧಿ ಗೆ ಪೂರಕವಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಅಗಲಿಕೆಯಿಂದ ಆ ಪ್ರದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಿ, ಮೃತರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಉಮೇಶ್ ಕಾರಜೋಳ ಮತ್ತು ಚಿತ್ತಾಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ  ದೀಪಕ್ ಹೊಸ್ಸೂರಕರ್ ತಿಳಿಸಿದ್ದಾರೆ.

Leave A Reply

Your email address will not be published.