Shubhashaya News

ವಾಲ್ಮೀಕಿ ನಾಯಕ ನಿಧನಕ್ಕೆ ಪ್ರಿಯಾಂಕ್ ಖರ್ಗೆ ಸಂತಾಪ

ಚಿತ್ತಾಪೂರ ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ನಿಧನಕ್ಕೆ ಮಾಜಿ ಸಚಿವ, ಹಾಲಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಶೋಕ ಸಂದೇಶ ತಿಳಿಸಿರುವ ಶಾಸಕ ಪ್ರಿಯಾಂಕ್, ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕರಾದ ವಾಲ್ಮೀಕಿ ನಾಯಕ್ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನೂ ಈಗಲೂ ನಂಬಲಾಗುತ್ತಿಲ್ಲ.

ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.