ಆಳಂದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಏಪ್ರಿಲ್ 20ರವರೆಗೆ ವಿಸ್ತರಿಸಲಾಗಿದೆ ಎಂದು ಆಳಂದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು www.ssp.postmatric.karnataka.gov.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ 2021ರ ಏಪ್ರಿಲ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಯಾದಲ್ಲಿ ವಿದ್ಯಾರ್ಥಿಗಳು postmetrichelpdesk@karnataka.gov.in ಇ-ಮೇಲ್ ಅಥವಾ ಆಳಂದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಅವಶ್ಯಕ ದಾಖಲಾತಿಗಳೊಂದಿಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
Comments are closed.