Shubhashaya News

ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಆರಂಭ: ರೈತರು ಬೆಳೆ ವಿವರ ದಾಖಲಿಸಲು ಸೂಚನೆ

ಪ್ರಸಕ್ತ 2020-21ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಯು ಜಿಲ್ಲೆಯಾದ್ಯಂತ ಆರಂಭಗೊಂಡಿದೆ. ಸರ್ಕಾರದ ಆದೇಶದನ್ವಯ ಈ ಬಾರಿ ಬೆಳೆ ಸಮೀಕ್ಷೆ ಕಾರ್ಯಕ್ಕಾಗಿ ರೈತರು “ಬೇಸಿಗೆ ರೈತರ ಬೆಳೆ ಸಮೀಕ್ಷೆ 2020-21” ಆ್ಯಪ್ ಮೂಲಕ ತಮ್ಮ ಸ್ವತಃ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಹಾಗೂ ಕಮಲಾಪುರ ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ಅವರು ತಿಳಿಸಿದ್ದಾರೆ.
ಕಲಬುರಗಿ ಹಾಗೂ ಕಮಲಾಪೂರ ತಾಲೂಕಿನ ರೈತರು ತಮ್ಮ ಜಮೀನಿನಲ್ಲಿ ಬೇಸಿಗೆ ಹಂಗಾಮಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು “ಬೇಸಿಗೆ ರೈತರ ಬೆಳೆ ಸಮೀಕ್ಷೆ 2020-21” (Summer Farmer Crop Survey App 2020-21) ಎಂಬ ಆ್ಯಪ್ನ್ನು ತಮ್ಮ ಮೊಬೈಲ್ ಮೂಲಕ ಗೂಗಲ್ ಪ್ಲೇ-ಸ್ಟೋರ್ನಿಂದ ಈ ಆ್ಯಪ್ ಡೌನ್ಲೋಡ್ ಮಾಡಿಕೊಂಡು ರೈತರು ನಿಗದಿತ ಅವಧಿಯೊಳಗಾಗಿ ಬೆಳೆ ವಿವರ ದಾಖಲಿಸಬೇಕು.
ಇದಲ್ಲದೇ ರೈತ ಬಾಂಧವರು ಕೃಷಿ, ಕಂದಾಯ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಸೌಲಭ್ಯ ಪಡೆಯಲು ರೈತರು ಕಡ್ಡಾಯವಾಗಿ ಫ್ರೂಟ್ಸ್ (Fruits)ನೋಂದಣೆ ಮಾಡಬೇಕಾಗಿರುತ್ತದೆ. ಆದ್ದರಿಂದ ರೈತರು ತಮ್ಮ ಹೆಸರು ಫ್ರೂಟ್ಸ್ (Fruits)ನಲ್ಲಿ ನೋಂದಾಯಿಸುವ ಸಲುವಾಗಿ ತಮ್ಮ ಹಿಡುವಳಿ ಪತ್ರ, ಬ್ಯಾಂಕ ಖಾತೆ ವಿವರ, ಆಧಾರ್ ಕಾರ್ಡ್ ಹಾಗೂ ಪರಿಶಿಷ ಜಾತಿ, ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಗಳ ದಾಖಲಾತಿಗಳನ್ನು ಕೃಷಿ, ಕಂದಾಯ, ತೋಟಗಾರಿಕೆ ಇಲಾಖಾ ಅಧಿಕಾರಿಗಳಿಗೆ ನೀಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Comments are closed.

Don`t copy text!