Shubhashaya News

BREAKING: SSLC ಮತ್ತು PUC ಪರೀಕ್ಷೆ ಅಂತಿಮ ವೇಳಪಟ್ಟಿ ಪ್ರಕಟ, ಯಾವ ದಿನ? ಯಾವ ವಿಷಯ ಇಲ್ಲಿದೆ ಮಾಹಿತಿ!

ಪಿಯುಸಿ ಪರೀಕ್ಷೆಯು ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆಯಲಿದೆ. SSLC ಪರೀಕ್ಷೆಯು ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ನಡೆಯಲಿದೆ ಎಂದು ಸಚಿವ ಮಧುಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. 

ಅಂದ ಹಾಗೇ ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಒಳಗೊಂಡಿದೆ ಆಂತ ತಿಳಿಸಿದರು .
01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ

04-03-2024 ಸೋಮವಾರ ಗಣಿತ ಪರೀಕ್ಷೆ

05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ

06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ

07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ

11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ

13-03-2024 ರಂದು ಇಂಗ್ಲಿಷ್ ಪರೀಕ್ಷೆ

15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ

18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ

20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ

22-03-2024 ರಂದು ಹಿಂದಿ ಪರೀಕ್ಷೆ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ (ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ)

25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಸಂಸ್ಕೃತ ಇಂಗ್ಲಿಷ್, ಇಂಗ್ಲಿಷ್-NCERT

27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ

30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ

02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ

03-04-2024 ಅರ್ಥಶಾಸ್ತ್ರ ಪರೀಕ್ಷೆ

 

Comments are closed.

Don`t copy text!