Shubhashaya News

ಕಾಂಗ್ರೆಸ್ ಗೆ ಬಿಗ್ ಶಾಕ್ : ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿ ಸೇರ್ಪಡೆ!

ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ಸಿಗೆ ಬಿಗ್ ಶಾಕ್ ಎದುರಾಗಿದ್ದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಮಿಸ್ ಆಗಿದ್ದರಿಂದ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಸಹಜವಾಗಿ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು. ಇದೀಗ  ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಈ ವೇಳೆ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಶಾಸಕ ಸುನಿಲ್ ಕುಮಾರ್ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಉಪಸ್ಥಿತಿ ಇದ್ದರು.

ಈ ವೇಳೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿಯವರು, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಶ್ರೀರಾಮನವಮಿ ದಿನದಂದೇ ಪಕ್ಷಕ್ಕೆ ಸೇರಿದ್ದು ಸಂತೋಷವಾಗಿದೆ.ಹೆಚ್ಚು ಮತಗಳ ಅಂತರದಲ್ಲಿ ಗೆದ್ದರೂ ಕಾಂಗ್ರೆಸ್ ನನಗೆ ಮೋಸ ಮಾಡಿದೆ.ನನ್ನ ಮನೆ ಸುಟ್ಟಿದ್ದಾರೆ ತಪ್ಪು ಮಾಡಿದವರು ಹೊರಗೆ ಓಡಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

Comments are closed.

Don`t copy text!