Shubhashaya News

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಏಪ್ರಿಲ್‌ ತಿಂಗಳ ರೇಷನ್ ಜೊತೆಗೆ ಖಾತೆಗೆ ಹಣ ಜಮಾ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಏಪ್ರಿಲ್‌ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

Comments are closed.

Don`t copy text!