Shubhashaya News

BIG NEWS : ಸಂಸದ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರುವ ವಿಮಾನ ಟಿಕೆಟ್ ಮತ್ತೆ ಕ್ಯಾನ್ಸಲ್!

ಅತ್ಯಾಚಾರ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇಂದು ಬೆಂಗಳೂರಿಗೆ ಬರುವ ವಿಮಾನ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ ಎನ್ನಲಾಗಿದೆ.

ಮೇ 15ರಂದು ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ವಾಪಾಸ್ ಆಗಲು ಮುಂಗಡವಾಗಿ ಕಾಯ್ದಿರಿಸಿದ್ದ ಲುಫಾನ್ಸಾ ವಿಮಾನಯಾನ ಸಂಸ್ಥೆಯ ವಿಮಾನ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಇಂದು ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಆಗಮಿಸಲ್ಲ ಎಂದು ಹೇಳಲಾಗುತ್ತಿದೆ.

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಪ್ರಜ್ವಲ್ ಭಾರತಕ್ಕೆ ವಾಪಾಸ್ ಆಗುವುದು ಸದ್ಯಕ್ಕೆ ಅನುಮಾನ ಎನ್ನಲಾಗುತ್ತಿದೆ. ಜೂ.4ರ ಫಲಿತಾಂಶದ ಬಳಿಕ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ ಎಂದು ಎನ್ನಲಾಗಿದೆ.

Comments are closed.

Don`t copy text!