ಮತ್ತೆ ವಕ್ಕರಿಸಿಕೊಂಡಿರುವ ಕೋರೋನಾ ಮಹಾಮಾರಿಗೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಈಗ ಮತ್ತೊಂದು ಜೀವ ಬಲಿಯಾಗಿದೆ. ದೇಶದಲ್ಲಿಯೇ ಮೊದಲ ಪ್ರಕರಣ ದಾಖಲಾಗಿದ್ದ ಕಲಬುರಗಿ ಜಿಲ್ಲೆಯಲ್ಲಿ ಕೋರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗಿ ಕಂಡು ಬರುತ್ತಿವೆ.

ಆಳಂದ ಜೆಸ್ಕಾಂನಲ್ಲಿ ಕಿರಿಯ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮಂತ ಕೋರೆ ಕೋರೋನಾಗೆ ಬಲಿಯಾಗಿದ್ದಾರೆ.