
ಚಿತ್ತಾಪುರ: ತಾಲೂಕಿನ ಮೊಗಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರವನ್ನು ಗ್ರಾಪಂ ಅಧ್ಯಕ್ಷ ತಮ್ಮಣ್ಣ ಡಿಗ್ಗಿ ಉದ್ಘಾಟಿಸಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‍ಡಿಎಂಸಿ) ಸದಸ್ಯರು ತಮ್ಮ ಜವಾಬ್ದಾರಿ ಅರಿತುಕೊಂಡು ಶಾಲೆಯ ಸಮಗ್ರ ಅಭವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಗ್ರಾಪಂ ಅಧ್ಯಕ್ಷ ತಮ್ಮಣ್ಣ ಡಿಗ್ಗಿ ಹೇಳಿದರು.
ತಾಲೂಕಿನ ಮೊಗಲಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಮತ್ತು ಎಸ್‍ಡಿಎಂಸಿ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಸ್‍ಡಿಎಂಸಿ ಸಹಕಾರದಿಂದ ಶಾಲೆಗಳು ಪ್ರಗತಿ ಕಾಣಲಿವೆ. ಶಾಲಾ ಸಮುದಾಯ ಸಮರ್ಪಕವಾಗಿ ಬಳಸಿಕೊಳ್ಳುವ ಜಾಣ್ಮೆ ಮುಖ್ಯ ಶಿಕ್ಷಕರಿಗೆ ಇರಬೇಕು ಎಂದು ಹೇಳಿದರು.
ಶಿಕ್ಷಕ ಸದಾಶಿವ ಮತ್ತು ಸುನೀಲ್ ಅವರು ಎಸ್‍ಡಿಎಂಸಿ ಸದಸ್ಯರಿಗೆ ತರಬೇತಿ ನೀಡಿದರು.
ಮುಖ್ಯಗುರು ಸುರೇಶ ಸರಾಫ್ ಅಧ್ಯಕ್ಷತೆ ವಹಿಸಿದ್ದರು.
ಇಸಿಒ ಸಿದ್ರಾಮಯ್ಯ, ಗ್ರಾಪಂ ಸದಸ್ಯರಾದ ಲಖನ್ ರಾಠೋಡ, ಬನ್ನೇಶಿ ಸುಲೇಗಾಂವ, ಕಿಶನ್ ರಾಠೋಡ, ಎಸ್‍ಡಿಎಂಸಿ ಅಧ್ಯಕ್ಷ ರಮೇಶ ಪೂಜಾರಿ, ಉಪಾಧ್ಯಕ್ಷೆ ಪಾರ್ವತಿ ರಮೇಶ, ಉದಯಕುಮಾರ ಹೂವಿನೋರ್, ಮಲ್ಲಿಕಾರ್ಜುನ ಪೂಜಾರಿ, ಸಂತೋಷ ತೊನಸನಳ್ಳಿ, ರಾಜು ದೊರೆ, ಯಲ್ಲಾಲಿಂಗ ಪೂಜಾರಿ ಇದ್ದರು.
ಶಿಕ್ಷಕ ವೀರಸಂಗಪ್ಪ ಸುಲೇಗಾಂವ ನಿರೂಪಿಸಿದರು. ಶಿವಕುಮಾರ ವಂದಿಸಿದರು.